ಉಜಿರೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಡಾ. ಭಾಸ್ಕರ ಹೆಗಡೆ ಅವರು ತಮ್ಮ 33 ವರ್ಷಗಳ ಪ್ರಾಧ್ಯಾಪಕ ವೃತ್ತಿಯಿಂದ ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ, ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಅಧ್ಯಾಪಕರು, ವಿದ್ಯಾರ್ಥಿ ಬಳಗ ಹಾಗೂ ಹಿರಿಯ ವಿದ್ಯಾರ್ಥಿಗಳ ಸಹಯೋಗದಲ್ಲಿ ‘ಭಾಸ್ಕರ ಪರ್ವ– ಮಾಧ್ಯಮ ಗುರುವಿಗೆ ಅಭಿನಂದನೆ’ ಎಂಬ ವಿಶೇಷ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಸಮಾರಂಭದ ಉದ್ಘಾಟನೆ ಹಾಗೂ ಅಭಿನಂದನಾ ಗ್ರಂಥದ ಬಿಡುಗಡೆಯನ್ನು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ. ಸತೀಶ್ ಚಂದ್ರ ಎಸ್. ಅವರು ನೆರವೇರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಸಾಕ್ಷ್ಯ ಚಿತ್ರದ ಬಿಡುಗಡೆಯನ್ನು ಕ್ಷೇಮವನ, ಬೆಂಗಳೂರು ಇದರ ಕಾರ್ಯನಿರ್ವಹಕ ನಿರ್ದೇಶಕಿ ಶ್ರೀಮತಿ ಶ್ರದ್ಧಾ ಅಮಿತ್ ಅವರು ಮಾಡುವರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಿಶ್ವನಾಥ .ಪಿ ಅವರು ವಹಿಸಲಿದ್ದಾರೆ. ಸಮಾರಂಭದಲ್ಲಿ ಉಜಿರೆ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಡಾ. ಭಾಸ್ಕರ ಹೆಗಡೆ ಅವರು ಉಪಸ್ಥಿತರಿರುವರು.
ಈ ಕಾರ್ಯಕ್ರಮವು ಜನವರಿ 31, ಶನಿವಾರ ಬೆಳಿಗ್ಗೆ 10 ಗಂಟೆಗೆ, ಉಜಿರೆಯ ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


