ಜಿ. ಚಂದ್ರಕಾಂತಗೆ ಕರ್ನಾಟಕ ಕಾಯಕ ರತ್ನ ಮತ್ತು ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ ಪ್ರದಾನ

Upayuktha
0


ಬೀದರ: ತ್ರಿಭಾಷಾ ವಚನ ಗಾಯನದ ಪರಿಣತಿಯನ್ನು ಗುರುತಿಸಿ ಬೀದರಿನ ವಿಶ್ವ ಕನ್ನಡಿಗರ ಸಂಸ್ಥೆಯಿಂದ  ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿವೃತ್ತ ಉಪನಿರ್ದೇಶಕ ಜಿ. ಚಂದ್ರಕಾಂತ ಅವರಿಗೆ ಗುರುವಾರ ಬೀದರಿನ ಅವರ ಸ್ವಗೃಹದಲ್ಲಿ ರಾಷ್ಟ್ರೀಯ ಮಟ್ಟದ ಕರ್ನಾಟಕ ಕಾಯಕ ರತ್ನ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ ಪ್ರದಾನ ಮಾಡಲಾಯಿತು.


ವಿಶ್ವ ಕನ್ನಡಿಗರ ಸಂಸ್ಥೆಯ ಅಧ್ಯಕ್ಷ ಡಾ.ಸುಬ್ಬಣ್ಣ ಕರಕನಳ್ಳಿ,  ಚಿಟ್ಟಾ ಹಿರಿಯ ರಂಗ ಭೂಮಿ ಕಲಾವಿದ ಶೇಷಪ್ಪ, ಹಿರಿಯ ಜಾನಪದ ಗಾಯಕ ಶಂಭುಲಿಂಗ ವಾಲ್ದೊಡ್ಡಿ ಮತ್ತು ಜೈ ಹನುಮಾನ ಹಿರಿಯರ ನಾಗರಿಕರ ಸಂಘದ ಅಧ್ಯಕ್ಷ ರಮೇಶ ಇಟಗಿಕರ್, ಚಂದ್ರಕಾಂತ ಪತ್ನಿ ಮೌನೇಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಗೋರಚಿಂಚೋಳಿ ಗ್ರಾಮದ ಜಿ. ಚಂದ್ರಕಾಂತ, ಬಾಲ್ಯದಿಂದಲೂ ಭಜನೆ ಮತ್ತು ನಾಟಕದ ಬಗ್ಗೆ ಒಲವು ಹೊಂದಿದ್ದರು. ಸೌಭಾಗ್ಯ ಲಕ್ಷ್ಮೀ ಸಾಮಾಜಿಕ ನಾಟಕದಲ್ಲಿ ಬಾಲ ನಟನಾಗಿ ನಟಿಸಿದ್ದಾರೆ.


ಮಹಾನ್ ಮಾನವತಾವಾದಿ ಬಸವೇಶ್ವರರ ವಚನಗಳ ಸಾರವನ್ನು ಇತರ ಭಾಷಿಕರು ಮತ್ತು ಧಾರ್ಮಿಕರಿಗೂ ತಲುಪಿಸುವ ಉದ್ದೇಶದಿಂದ, ಪಂಚ ಭಾಷೆಗಳಲ್ಲಿ ವಿವಿಧ ರಾಗಗಳಲ್ಲಿ ಸುಮಾರು 20-25 ವಚನಗಳನ್ನು ಹಾಡುವರು. ಇದಲ್ಲದೆ  ಅವರು ಗಜಲ್‌, ಜಾನಪದ ಗೀತೆ, ಕನ್ನಡ ಗೀತೆ ಮತ್ತು ಮರಾಠಿ ಅಭಂಗಗಳನ್ನು ಸಹ ಹಾಡುತ್ತಾರೆ.


ಅವರು ರಾಜ್ಯ ಮಟ್ಟದ ವಿವಿಧ ಉತ್ಸವಗಳಲ್ಲಿ ತ್ರಿಭಾಷಾ ವಚನ ಮತ್ತು ಗಜಲ್‌ಗಳ ಗಾಯನ ಮಾಡಿದ್ದಾರೆ. ಅವರು ಆಕಾಶವಾಣಿಯಿಂದ ಹಿಂದೂಸ್ತಾನಿ ಸುಗಮ ಸಂಗೀತದಲ್ಲಿ "ಬಿ" ದರ್ಜೆಯ ಕಲಾವಿದರಾಗಿಯೂ ಆಯ್ಕೆಯಾಗಿದ್ದಾರೆ.



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top