ಬಿಂದು ವರ್ಣೋತ್ಸವ: ಗಡಿನಾಡ ಸಾಂಸ್ಕೃತಿಕ ವೇದಿಕೆ ಕಾರ್ಯಕ್ರಮ

Upayuktha
0


ಕಾಸರಗೋಡು: ಕಾಸರಗೋಡಿನ ಪ್ರಸಿದ್ಧ ಆಭರಣ ಮಳಿಗೆಯಾದ ಬಿಂದು ಜ್ಯುವೆಲ್ಲರ್ಸ್ ಸಂಸ್ಥೆಯ 40ನೇ ವಾರ್ಷಿಕೋತ್ಸವದ ಅಂಗವಾಗಿ ‘ವರ್ಣೋತ್ಸವ’ ಎಂಬ ವಿನೂತನ ಕಾರ್ಯಕ್ರಮ 15 ದಿನಗಳ ಕಾಲ ಯಶಸ್ವಿಯಾಗಿ ನಡೆಯಿತು.


ಕಾರ್ಯಕ್ರಮದ ಅವಧಿಯಲ್ಲಿ ಪ್ರತಿದಿನವೂ ವಿವಿಧ ಸಾಂಸ್ಕೃತಿಕ ಕಲಾತಂಡಗಳ ಪ್ರದರ್ಶನಗಳು ಆಯೋಜಿಸಲ್ಪಟ್ಟಿದ್ದು, ಗ್ರಾಹಕರು, ಪ್ರತಿಭಾವಂತರು ಹಾಗೂ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಗೌರವಿಸಲಾಯಿತು. ಈ ಸಂಭ್ರಮದ ಅಂಗವಾಗಿ ಗಡಿನಾಡ ಸಾಂಸ್ಕೃತಿಕ ಕಲಾ ವೇದಿಕೆ (ರಿ.), ಕಾಸರಗೋಡು ಸಂಸ್ಥೆಯ ಸಾಂಸ್ಕೃತಿಕ ಕಲಾ ವೈಭವವು ವರ್ಣರಂಜಿತವಾಗಿ ಪ್ರದರ್ಶಿತವಾಗಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು.


ಕಾರ್ಯಕ್ರಮವು ಸಮರ್ಪಕ ಸಂಯೋಜನೆ ಮತ್ತು ಮನಮೋಹಕ ನಿರೂಪಣೆಯೊಂದಿಗೆ ನಡೆಯಿತು. ಸುಮಾರು 64 ಕಲಾವಿದರು ಭಾಗವಹಿಸಿ ನೃತ್ಯ, ಸಂಗೀತ ಸೇರಿದಂತೆ ವೈವಿಧ್ಯಮಯ ಕಲಾಪ್ರದರ್ಶನಗಳನ್ನು ನೀಡಿದರು.


ಕಾರ್ಯಕ್ರಮದ ಗುಣಮಟ್ಟವನ್ನು ಬಿಂದು ಜ್ಯುವೆಲ್ಲರ್ಸ್‌ನ ಮಾಲಕರು, ಸಿಬ್ಬಂದಿ ವರ್ಗದವರು ಹಾಗೂ ಹಾಜರಿದ್ದ ಪ್ರೇಕ್ಷಕರು ಶ್ಲಾಘಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಭಾಗವಹಿಸಿದ ಕಲಾವಿದರಿಗೆ ಸಂಸ್ಥೆಯ ವತಿಯಿಂದ ಸ್ಮರಣಿಕೆಗಳನ್ನು ವಿತರಿಸಿ ಪ್ರೋತ್ಸಾಹಿಸಲಾಯಿತು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top