ಚಿತ್ರ: ಧರ್ಮಸ್ಥಳ ದೇವಳದ ಪಾರುಪತ್ಯಗಾರರಾದ ಲಕ್ಷ್ಮೀನಾರಾಯಣ ರಾವ್ ತರಬೇತಿ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಉಜಿರೆ: ವೃತ್ತಿಯಲ್ಲಿ ಶಿಸ್ತು, ಸೇವಾಮನೋಭಾವ ಮತ್ತು ಪ್ರಾಮಾಣಿಕತೆ ಇದ್ದಾಗ ಉನ್ನತ ಸಾಧನೆ ಮತ್ತು ಯಶಸ್ಸು ಸಾಧ್ಯವಾಗುತ್ತದೆ ಎಂದು ಧರ್ಮಸ್ಥಳ ದೇವಸ್ಥಾನದ ಪಾರುಪತ್ಯಗಾರರಾದ ಲಕ್ಷ್ಮೀನಾರಾಯಣ ರಾವ್ ಹೇಳಿದರು.
ಅವರು ಶುಕ್ರವಾರ ಉಜಿರೆಯಲ್ಲಿರುವ ರುಡ್‌ಸೆಟ್ ಸಂಸ್ಥೆಯಲ್ಲಿ ವಿದ್ಯುತ್ ಉಪಕರಣಗಳ ದುರಸ್ತಿ ಮತ್ತು ದ್ವಿಚಕ್ರ ವಾಹನಗಳ ರಿಪೇರಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.
ಅಧ್ಯಕ್ಷತೆ ವಹಿಸಿದ ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ. ವಿಜಯಕುಮಾರ್ ಮಾತನಾಡಿ ಸರ್ಕಾರ ಹಾಗೂ ಬ್ಯಾಂಕ್‌ನ ಸೌಲಭ್ಯಗಳ ಸದುಪಯೋಗ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಿ ಸ್ವಾವಲಂಬಿ ಜೀವನ ನಡೆಸಬೇಕು ಎಂದು ಶಿಬಿರಾರ್ಥಿಗಳಿಗೆ ಸಲಹೆ ನೀಡಿದರು.
ಸಂಸ್ಥೆಯ ನಿರ್ದೇಶಕ ಅಜೇಯ ಸ್ವಾಗತಿಸಿದರು. ಹಿರಿಯ ಉಪನ್ಯಾಸಕ ಕರುಣಾಕರ ಜೈನ್ ಧನ್ಯವಾದವಿತ್ತರು. ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರ್ವಹಿಸಿರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


