ಜಿಲ್ಲಾ ಬಿಜೆಪಿ ಯುವ ಮೋರ್ಚಾದಿಂದ ತೀವ್ರ ಆಕ್ರೋಶ
ಮಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸತತವಾಗಿ ಹಿಂದೂ ವಿರೋಧಿ ಹಾಗೂ ಅರಾಜಕ ನೀತಿಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ತೀವ್ರ ಖಂಡನೆ ವ್ಯಕ್ತಪಡಿಸಿದೆ.
ಈ ಕುರಿತು ಪ್ರಕಟಣೆ ನೀಡಿರುವ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಉಲ್ಲಾಳ್ ನಂದನ್ ಮಲ್ಯ ಅವರು, ಸಮಾಜಘಾತುಕ ಸಂಘಟನೆಯೆಂದು ಗುರುತಿಸಲ್ಪಟ್ಟ ಪಿಎಫ್‌ಐ ಸಂಘಟನೆಯ 1,600ಕ್ಕೂ ಹೆಚ್ಚು ಕಾರ್ಯಕರ್ತರ ಮೇಲಿನ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯುವ ಮೂಲಕ ಕಾಂಗ್ರೆಸ್ ಸರ್ಕಾರ ಉಗ್ರ ಮನಸ್ಥಿತಿಗೆ ಪರೋಕ್ಷವಾಗಿ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿದ್ದಾರೆ. ಅದೇ ಸಮಯದಲ್ಲಿ ದೇಶಭಕ್ತ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೇಲೆ ಮಾತ್ರ ದಮನಕಾರಿ ಕ್ರಮಗಳನ್ನು ಕೈಗೊಳ್ಳುತ್ತಿರುವುದು ಶೋಚನೀಯವೆಂದು ಅವರು ಹೇಳಿದ್ದಾರೆ.
ಇತ್ತೀಚೆಗೆ ಉಡುಪಿ ಪರ್ಯಾಯ ಮಹೋತ್ಸವದ ಸಂದರ್ಭದಲ್ಲಿ ಶತಮಾನಗಳಿಂದ ನಡೆದುಕೊಂಡು ಬಂದಿರುವ ಸಂಪ್ರದಾಯದಂತೆ ಜಿಲ್ಲಾಧಿಕಾರಿಗಳು ಭಗವಾಧ್ವಜ ಹಾರಿಸಿ ಮೆರವಣಿಗೆಗೆ ಚಾಲನೆ ನೀಡಿದ್ದನ್ನು ವಿರೋಧಿಸಿ ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗುತ್ತಿರುವುದು ಕಾಂಗ್ರೆಸ್ ಪಕ್ಷದ ಸನಾತನ ಧರ್ಮದ ಮೇಲಿನ ದ್ವೇಷವನ್ನು ತೋರಿಸುತ್ತದೆ ಎಂದು ಅವರು ಹೇಳಿದ್ದಾರೆ.
ಆರ್‌ಎಸ್‌ಎಸ್ ಸಂಸ್ಥೆ ತನ್ನ 100ನೇ ವರ್ಷಾಚರಣೆಯನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ದೇಶಾದ್ಯಂತ ಸಾಂಸ್ಕೃತಿಕ ಜಾಗೃತಿ ಮೂಡಿಸುತ್ತಿರುವುದನ್ನು ಸರ್ಕಾರ ಸಹಿಸಿಕೊಳ್ಳಲಾಗುತ್ತಿಲ್ಲ. ಪರಿಣಾಮವಾಗಿ ಪಥ ಸಂಚಲನಗಳಿಗೆ ಅಡ್ಡಿಪಡಿಸಲಾಗುತ್ತಿದೆ ಎಂದು ಆರೋಪಿಸಿದ ಅವರು, ಹಿಂದೂ ಸಮಾಜಕ್ಕಾಗಿ ಜೀವನವನ್ನೇ ಸಮರ್ಪಿಸಿದ ಹಿರಿಯ ಮಾರ್ಗದರ್ಶಕರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರ ಮೇಲೆ ರಾಜಕೀಯ ಪ್ರೇರಿತ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಎಂದು ದೂರಿದರು.
ಹಿರಿಯ ನಾಯಕರ ಮನೆಗಳಿಗೆ ರಾತ್ರಿ ವೇಳೆ ಪೊಲೀಸರು ನುಗ್ಗಿ ಕಿರುಕುಳ ನೀಡುತ್ತಿರುವುದು ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುತ್ತಿರುವುದು ‘ಪೊಲೀಸ್ ರಾಜ್ಯ’ ನಿರ್ಮಾಣದ ಸಂಕೇತವಾಗಿದೆ ಎಂದು ಅವರು ಹೇಳಿದರು. ಕರಾವಳಿ ಭಾಗದಲ್ಲಿ ಯಕ್ಷಗಾನ, ಕೃಷ್ಣ ಜನ್ಮಾಷ್ಟಮಿ ಹಾಗೂ ಸಾಂಪ್ರದಾಯಿಕ ಕೋಳಿ ಅಂಕಗಳಂತಹ ಧಾರ್ಮಿಕ ಆಚರಣೆಗಳಿಗೂ ಅಡ್ಡಿಪಡಿಸಲಾಗುತ್ತಿರುವುದು ಅತ್ಯಂತ ಖಂಡನೀಯವೆಂದು ಅವರು ಅಭಿಪ್ರಾಯಪಟ್ಟರು.
ಕಾಂಗ್ರೆಸ್ ಸರ್ಕಾರದ ಈ ದಮನಕಾರಿ ಹಾಗೂ ಹಿಂದೂ ವಿರೋಧಿ ನೀತಿಗಳನ್ನು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಸಹಿಸುವುದಿಲ್ಲ. ಮುಂಬರುವ ದಿನಗಳಲ್ಲಿ ಇಡೀ ಹಿಂದೂ ಸಮಾಜವು ಈ ನೀತಿಗಳಿಗೆ ತಕ್ಕ ಪ್ರತಿಕ್ರಿಯೆ ನೀಡಲಿದೆ ಎಂದು ಅವರು ಎಚ್ಚರಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


