ಕಲಾಕುಂಚದ 35ನೇ ವರ್ಷದ ವಾರ್ಷಿಕೋತ್ಸವ ಶ್ಲಾಘನೀಯ : ಚಂದ್ರಶೇಖರ್

Upayuktha
0


ದಾವಣಗೆರೆ: ನಮ್ಮ ನಿಮ್ಮೆಲ್ಲರ ಆರೋಗ್ಯ ಭಾಗ್ಯಕ್ಕೆ ಈ ಸಾಂಸ್ಕೃತಿಕ ಚಟುವಟಿಕೆಗಳು ದಿವ್ಯ ಭವ್ಯ ಕೆಲವು ಸಂಘಟನೆಗಳು ಆರಂಭ ಶೂರತ್ವಕ್ಕೆ ಸೀಮಿತವಾಗಿ ನಂತರ ಮುಚ್ಚಿ ಹೋಗುತ್ತದೆ. ಕಳೆದ 35 ವರ್ಷಗಳಿಂದ ನಿರಂತರವಾಗಿ ಕಠಿಣ ಪರಿಶ್ರಮದಿಂದ ಕಲೆ, ಸಾಹಿತ್ಯ, ಸಂಗೀತ, ಸಂಸ್ಕೃತಿ, ಯಕ್ಷಗಾನ ಸೇರಿದಂತೆ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುತ್ತಿರುವ  ದಾವಣಗೆರೆಯ ಕಲಾಕುಂಚ 35ನೇ ವರ್ಷದ ವಾರ್ಷಿಕೋತ್ಸವ ಶ್ಲಾಘನೀಯ ಒಂದು ಸಂಘಟನೆ ನಡೆಸುವುದು ಸುಲಭದ ಕೆಲಸವಲ್ಲ ಎಂದು ಅಂಚೆ ಇಲಾಖೆಯ ದಾವಣಗೆರೆ ಜಿಲ್ಲೆಯ ಅಧೀಕ್ಷಕರಾದ ಚಂದ್ರಶೇಖರ್‍ರವರು 35ನೇ ವರ್ಷದ ವಾರ್ಷಿಕೋತ್ಸವವನ್ನು ಕಲಾಕುಂಚ ಕಛೇರಿಯ ಸಭಾಂಗಣದಲ್ಲಿ ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದರು.


ಸಮಾರಂಭದ ಅಧ್ಯಕ್ಷತೆಯನ್ನು ಕಲಾಕುಂಚದ ಅಧ್ಯಕ್ಷರಾದ ಕೆ.ಹೆಚ್.ಮಂಜುನಾಥ್‍ರವರು ಮಾತನಾಡಿ, ಯಾವ ಸಂಘ ಸಂಸ್ಥೆಯವರು ಮಾಡದಂತಹ ನಿರಂತರ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುತ್ತಿರುವ ವಿಶೇಷ ಸಂಸ್ಥೆ ಕಲಾಕುಂಚ ಮಹಿಳೆಯರಿಗೆ, ಮಕ್ಕಳಿಗೆ ಅವರಲ್ಲಿರುವ ಪ್ರತಿಭೆಗಳನ್ನು ಅನಾವರಣಗೊಳಿಸಿ ಮುಕ್ತವಾದ ವೇದಿಕೆಯನ್ನು ಕಲ್ಪಿಸುವ ಕಾಯಕ ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ಎಂದರು.


ಸಮಾರಂಭದ ಮುಖ್ಯ ಅತಿಥಿಗಳಾಗಿ ಡಾ|| ಶಾಂತಾ ಶ್ರೀಪಾದ್ ಭಟ್ ಮಾತನಾಡಿ, ಪರಿಸರ ಉಳಿಸಿ, ಬೆಳೆಸುವುದು, ಸ್ವಚ್ಛತೆ ಕಾಪಾಡುವುದು ನಮ್ಮ ನಿಮ್ಮೆಲ್ಲರ ಆದ್ಯ ಕರ್ತವ್ಯ. ಎಲ್ಲರೂ ಗಿಡ, ಮರಗಳನ್ನು ಬೆಳೆಸಿದರೆ ಪ್ರಕೃತಿ ಬೆಳೆಯುತ್ತದೆ. ಜೊತೆಗೆ ವಾಣಿಜ್ಯ ನಗರಿಯನ್ನು ಸಾಂಸ್ಕೃತಿಕ ನಗರಿಯಾಗಿ ಪರಿವರ್ತನೆ ಮಾಡುತ್ತಿರುವ ಕಲಾಕುಂಚ ಸಾಧನೆಗೆ ನಮ್ಮ ಮೆಚ್ಚುಗೆ ಎಂದರು.


ಕಲಾಕುಂಚ ಮಹಿಳಾ ವಿಭಾಗದ ಅಧ್ಯಕ್ಷರಾದ ಹೇಮಾ ಶಾಂತಪ್ಪ ಪೂಜಾರಿಯವರು ಮಾತನಾಡಿ, ಕಲಾಕುಂಚ 35ನೇ ವರ್ಷ ನಡೆದು ಬಂದ ದಾರಿಯನ್ನು ವಿವರಿಸಿದರು. ಕಲಾಕುಂಚ ಮಹಿಳಾ ವಿಭಾಗದ ಸಂಸ್ಥಾಪಕರಾದ ಜ್ಯೋತಿ ಗಣೇಶ್ ಶೆಣೈ,  ಗೌರವ ಅಧ್ಯಕ್ಷರಾದ ವಸಂತಿ ಮಂಜುನಾಥ್, ಕಲಾಕುಂಚ ಕೆ.ಬಿ.ಬಡಾವಣೆಯ ಅಧ್ಯಕ್ಷರಾದ ವಿ.ಕೃಷ್ಣಮೂರ್ತಿ, ಎಂ.ಸಿ.ಸಿ. ಬ್ಲಾಕ್ ಶಾಖೆಯ ಅಧ್ಯಕ್ಷರಾದ  ಪ್ರಭಾ ರವೀಂದ್ರ ಉಪಸ್ಥಿತರಿದ್ದರು.


ಮುಕ್ತಾ ಶ್ರೀನಿವಾಸಪ್ರಭುರವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಈ ಅದ್ದೂರಿ ಸಮಾರಂಭಕ್ಕೆ ಪುಷ್ಪಾ ಮಂಜುನಾಥ್ ಸ್ವಾಗತಿಸಿದರು. ಮಮತಾ ಕೊಟ್ರೇಶ್ ಅಚ್ಚುಕಟ್ಟಾಗಿ ನಿರೂಪಿಸಿದರು. ಕಲಾಕುಂಚದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈಯವರ ಹುಟ್ಟುಹಬ್ಬಕ್ಕಾಗಿ ದಂಪತಿಗಳನ್ನು ಕಲಾಕುಂಚ ಸರ್ವ ಸದಸ್ಯರು ಗೌರವಿಸಿದರು. ಕೊನೆಯಲ್ಲಿ ಸುಮಾ ಏಕಾಂತಪ್ಪ ವಂದಿಸಿದರು.



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top