ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮೂಡಬಿದ್ರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದರೆ ಇವರ ಸಹಭಾಗಿತ್ವದಲ್ಲಿ ಜಿಲ್ಲಾ ಮಟ್ಟದ ಕ್ರೀಡೋತ್ಸವ ಇತ್ತೀಚೆಗೆ ಜರುಗಿತು. ಈ ಕ್ರೀಡೋತ್ಸವದಲ್ಲಿ ನಡ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆರು ಮಂದಿ ರೇಂಜರ್ ಗಳು ಭಾಗವಹಿಸಿದ್ದರು.
ರೇಂಜರ್ ಚೈತ್ರ ಎತ್ತರ ಜಿಗಿತ ಮತ್ತು ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನ, ರೇಂಜರ್ ಗಾಯತ್ರಿ 800 ಮೀಟರ್ ದ್ವಿತೀಯ ಮತ್ತು 400 ಮೀಟರ್ ತೃತೀಯ, ರೇಂಜರ್ ನವ್ಯಶ್ರೀ 1500 ಮೀಟರ್ ಹಾಗೂ 100 ಮೀಟರ್ ತೃತೀಯ, ರೇಂಜರ್ ಪ್ರಿಯಾ ಗುಂಡೆಸತದಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡರು.
ರೇಂಜರ್ ಲೀಡರ್ ವಸಂತಿ ಪಿ. ಇವರು ನೇತೃತ್ವ ವಹಿಸಿದ್ದರು. ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ಲಿಲ್ಲಿ ಪಿವಿ ಇವರು ಮಾರ್ಗದರ್ಶನ ನೀಡಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

