ದಾವಣಗೆರೆ: ದಾವಣಗೆರೆಯ ಖ್ಯಾತ ಹೋಮಿಯೋಪತಿ ವೈದ್ಯ, ಲೇಖಕಿ, ಕವಿಯತ್ರಿಯಾದ ಡಾ|| ಆರತಿ ಸುಂದರೇಶ್ ರವರಿಗೆ ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ವತಿಯಿಂದ ಇತ್ತೀಚಿಗೆ ನಗರದ ರೋಟರಿ ಬಾಲಭವನದಲ್ಲಿ “ಕರ್ನಾಕ ಸಿರಿಗನ್ನಡ ಸಿರಿ” ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು ಎಂದು ಕಲಾಕುಂಚದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.
ಮಕರ ಸಂಕ್ರಾಂತಿ ಪ್ರಯುಕ್ತ ರಾಜ್ಯ ಮಟ್ಟದ ಉಚಿತ ಕವಿಗೋಷ್ಠಿ ಹಮ್ಮಿಕೊಂಡಿದ್ದು ಈ ಸಮಾರಂಭ ಉದ್ಘಾಟಿಸಿದ ಡಾ|| ಆರತಿ ಸುಂದರೇಶ್ ಅವರ ನಿರಂತರ ಸಮಾಜ ಸೇವೆ ಸಾಂಸ್ಕೃತಿಕ ಚಟುವಟಿಕೆಗಳನ್ನು ನಿರಂತರವಾಗಿ ಕಠಿಣ ಪರಿಶ್ರಮದಿಂದ ಸಾಧನೆ ಮಾಡಿದ ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ ಎಂದು ಕಲಾಕುಂಚ ಸಮಿತಿಯವರು ಪ್ರಕಟಿಸಿದ್ದಾರೆ.
ಕಲಾಕುಂಚ ಮಹಿಳಾ ವಿಭಾಗದ ಸಂಸ್ಥಾಪಕರಾದ ಜ್ಯೋತಿ ಗಣೇಶ್ ಶೆಣೈ, ಕಲಾಕುಂಚ ಮಹಿಳಾ ವಿಭಾಗದ ಗೌರವ ಅಧ್ಯಕ್ಷರಾದ ವಸಂತಿ ಮಂಜುನಾಥ್, ಕಲಾಕುಂಚ ಮಹಿಳಾ ವಿಭಾಗದ ಅಧ್ಯಕ್ಷರಾದ ಹೇಮಾ ಶಾಂತಪ್ಪ ಪೂಜಾರಿ, ಮಹಿಳಾ ವಿಭಾಗದ ಪ್ರಥಮ ಅಧ್ಯಕ್ಷರು ಚಂದ್ರಶೇಖರ ಅಡಿಗ, ಕಲಾಕುಂಚದ ಅಧ್ಯಕ್ಷರಾದ ಕೆ.ಹೆಚ್.ಮಂಜುನಾಥ್, ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ಸಂಸ್ಥೆಯ ಸಮಿತಿ ಸದಸ್ಯರಾದ ಎಂ.ಎಸ್.ಚನ್ನಬಸವ ಶೀಲವಂತ, ರೋಟರಿ ಕ್ಲಬ್ ಅಧ್ಯಕ್ಷರಾದ ಸುನಿತಾ ಮೃತ್ಯುಂಜಯ ಮುಂತಾದವರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


