ಬೆಂಗಳೂರು: ಚೇತನ ಪ್ರತಿಷ್ಠಾನ, ಧಾರವಾಡ ವತಿಯಿಂದ ಆಯೋಜಿಸಲಾದ ‘ಜನ ಗಣ ಮನ’ (Jana Gana Mana) 255ನೇ ವಿಶೇಷ ಕಾರ್ಯಕ್ರಮವು ಶನಿವಾರ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ವಿಜೃಂಭಣೆಯಿಂದ ನಡೆಯಿತು.
ಚಂದ್ರಶೇಖರ ಮಾಡಲಗೇರಿ ಅವರ ಸಾರಥ್ಯದಲ್ಲಿ ಜರುಗಿದ ಈ ವಿಶೇಷ ಕಾರ್ಯಕ್ರಮದಲ್ಲಿ, ಡಾ. ವಾಣಿಶ್ರೀ ಕಾಸರಗೋಡು ಅವರಿಗೆ ಅವರ ಸಾಹಿತ್ಯ, ಸಾಂಸ್ಕೃತಿಕ ಸಂಘಟನೆ ಹಾಗೂ ಸಮಾಜ ಸೇವೆಯಲ್ಲಿನ ಅನನ್ಯ ಕೊಡುಗೆಗಳನ್ನು ಗುರುತಿಸಿ ‘ಭಾರತ ಸೇವಾರತ್ನ ರಾಷ್ಟ್ರೀಯ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.
ನೆಲ, ಜಲ, ಭಾಷೆ, ಕಲೆ, ಸಾಹಿತ್ಯ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಳಕಳಿಗೆ ಡಾ. ವಾಣಿಶ್ರೀ ಕಾಸರಗೋಡು ಅವರು ಸಲ್ಲಿಸಿರುವ ಸೇವೆಯನ್ನು ಈ ಸಂದರ್ಭದಲ್ಲಿ ವಕ್ತಾರರು ಶ್ಲಾಘಿಸಿದರು. ಅವರ ಸೇವೆ ಮುಂದಿನ ಪೀಳಿಗೆಗೆ ಪ್ರೇರಣೆಯಾಗಿ, ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ದಾರಿ ತೋರಿಸಲಿ ಎಂಬ ಆಶಯವನ್ನು ಚೇತನ ಪ್ರತಿಷ್ಠಾನದ ಅಧ್ಯಕ್ಷರು ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು, ಸಾಹಿತಿಗಳು, ಸಾಂಸ್ಕೃತಿಕ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದು, ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಸಾಕ್ಷಿಯಾದರು.
ಈ ಸಂದರ್ಭದಲ್ಲಿ ಮಾತನಾಡಿದ ಚೇತನ ಫೌಂಡೇಷನ್ ಅಧ್ಯಕ್ಷ ಡಾ. ಚಂದ್ರಶೇಖರ ಮಾಡಲಿಗೇರಿ, ಜನಪರ ಚಿಂತನೆ ಮತ್ತು ರಾಷ್ಟ್ರಭಕ್ತಿಯ ಮೌಲ್ಯಗಳನ್ನು ಮುಂದುವರಿಸುವಲ್ಲಿ ‘ಜನ ಗಣ ಮನ’ ಕಾರ್ಯಕ್ರಮ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಹೇಳಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


