ಅಡ್ಯನಡ್ಕ ಜನತಾ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ

Upayuktha
0

'ಜನತಾ ದರ್ಪಣ' ವಾರ್ಷಿಕ ಸವಿ ಸಂಚಿಕೆ ಬಿಡುಗಡೆ




ಅಡ್ಯನಡ್ಕ: ಇಲ್ಲಿನ ಜನತಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ಜನತಾ ವಿದ್ಯಾಸಂಸ್ಥೆಗಳ ವಾರ್ಷಿಕ ಸವಿ ಸಂಚಿಕೆ 'ಜನತಾ ದರ್ಪಣ' ಇದರ ಬಿಡುಗಡೆ ಕಾರ್ಯಕ್ರಮ ಜನವರಿ 24ರಂದು ಕಾಲೇಜಿನ ವಾರಣಾಶಿ ಕೃಷ್ಣ ಸಭಾಭವನದಲ್ಲಿ ನಡೆಯಿತು.


ಅಡ್ಯನಡ್ಕ ಎಜುಕೇಶನಲ್ ಸೊಸೈಟಿಯ ಅಧ್ಯಕ್ಷರಾದ ಗೋವಿಂದ ಪ್ರಕಾಶ್ ಸಾಯ ಅವರು ಅಧ್ಯಕ್ಷತೆ ವಹಿಸಿದ್ದರು. ಜನತಾ ವಿದ್ಯಾಸಂಸ್ಥೆಗಳ ಸಂಚಾಲಕರಾದ ಡಾ. ಅಶ್ವಿನಿ ಕೃಷ್ಣಮೂರ್ತಿ, ಅಡ್ಯನಡ್ಕ ಎಜುಕೇಶನಲ್ ಸೊಸೈಟಿಯ ಆಡಳಿತಾಧಿಕಾರಿಗಳಾದ ರಮೇಶ್ ಎಂ. ಬಾಯಾರು, ಆಡಳಿತ ಮಂಡಳಿಯ ಕೋಶಾಧಿಕಾರಿ ಕೇಶವ ಭಟ್ ಚವರ್ಕಾಡು, ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರವಿಕುಮಾರ್ ಆರ್ ಎಸ್ ಶುಭ ಹಾರೈಸಿದರು.

ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ವೀಣಾ ಟಿ. ಪ್ರಸ್ತಾವನೆಗೈದರು. ಉಪನ್ಯಾಸಕರ ಪರವಾಗಿ ಆಂಗ್ಲ ಭಾಷಾ ಉಪನ್ಯಾಸಕಿ ಜಯಶ್ರೀ ಕೆ. ಆರ್ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ವಸಂತ ಗೌಡ ಮಾತನಾಡಿದರು. ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಶುಭ ಹಾರೈಸಿದರು. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತಮ್ಮ ಅನುಭವಗಳನ್ನು ಹಂಚಿಕೊಂಡರು.


'ಜನತಾ ದರ್ಪಣ' ವಾರ್ಷಿಕ ಸವಿ ಸಂಚಿಕೆ ಬಿಡುಗಡೆ: ಅಡ್ಯನಡ್ಕ ಎಜುಕೇಶನಲ್ ಸೊಸೈಟಿಯ ಅಧ್ಯಕ್ಷರಾದ ಗೋವಿಂದ ಪ್ರಕಾಶ್ ಸಾಯ ಅವರು ಪ್ರಸಕ್ತ ಶೈಕ್ಷಣಿಕ ಸಾಲಿನ 'ಜನತಾ ದರ್ಪಣ' ವಾರ್ಷಿಕ ಸವಿ ಸಂಚಿಕೆಯನ್ನು ಬಿಡುಗಡೆಗೊಳಿಸಿದರು. ಆಡಳಿತ ಮಂಡಳಿಯ ಸದಸ್ಯರು, ಜನತಾ ವಿದ್ಯಾಸಂಸ್ಥೆಗಳ ಮುಖ್ಯಸ್ಥರು ಮತ್ತು ಶಿಕ್ಷಕರು ಉಪಸ್ಥಿತರಿದ್ದರು. ವಾರ್ಷಿಕ ಸಂಚಿಕೆಯ ಸಂಪಾದಕರಾದ ಶೀನಪ್ಪ ನಾಯ್ಕ್ ಕೆ. ಸಂಪಾದಕೀಯ ನುಡಿಗಳನ್ನಾಡಿದರು.

ಪ್ರಥಮ ವಾಣಿಜ್ಯ ವಿಭಾಗದ ಕು. ಸುನಿಧಿ ಸ್ವಾಗತಿಸಿ, ಪ್ರಥಮ ವಿಜ್ಞಾನ ವಿಭಾಗದ ದೀಕ್ಷಿತ್ ವಂದಿಸಿದರು. ಪ್ರಥಮ ಪಿಯುಸಿ ವಿದ್ಯಾರ್ಥಿನಿಯರು ಪ್ರಾರ್ಥನೆ ಮತ್ತು ಆಶಯ ಗೀತೆ ಹಾಡಿದರು. ಪ್ರಥಮ ಕಲಾ ವಿಭಾಗದ ಹಿತೇಶಕೃಷ್ಣ ನಿರೂಪಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top