ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ

Upayuktha
0


ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ‌ ಪ್ರಕ್ರಿಯೆ ನಡೆಯಿತು.

  

ವಿದ್ಯಾರ್ಥಿ ಸಂಘದ ಅಧ್ಯಕ್ಷ ಸ್ಥಾನಕ್ಕೆ ಅಂತಿಮ ಬಿಸಿಎ ವಿಭಾಗದ ಅಭನೀಶ್ ಕುಮಾರ್, ಉಪಾಧ್ಯಕ್ಷ ಸ್ಥಾನಕ್ಕೆ ಅಂತಿಮ ಬಿಎ ವಿಭಾಗದ ಸುಮನಾ, ಕಾರ್ಯದರ್ಶಿಯಾಗಿ ತೃತಿಯ ಬಿಬಿಎ ವಿಭಾಗದ ಅಶ್ವಿನ್ ಕುಮಾರ್, ಜೊತೆ ಕಾರ್ಯದರ್ಶಿಗಳಾಗಿ ತೃತೀಯ ಬಿಎಸ್ಸಿ ವಿಭಾಗದ ಗಣೇಶ್ ಕುಮಾರ್ ಹಾಗೂ ಅಂತಿಮ ಬಿಕಾಂ ವಿಭಾಗದ ಹಂಪನಾ ಎಚ್.ಪಿ ಇವರನ್ನು ಆಯ್ಕೆ ಮಾಡಲಾಯಿತು.


ಆಯ್ಕೆಯಾದ ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀ ಕೃಷ್ಣ ಗಣರಾಜ ಭಟ್ ಅಭಿನಂದಿಸಿ ಶುಭಹಾರೈಸಿದರು. ಚುನಾವಣಾ ಪ್ರಕ್ರಿಯೆಯನ್ನು ಕಾಲೇಜಿನ ಆಡಳಿತ ವಿಭಾಗದ ವಿಶೇಷಾಧಿಕಾರಿ ಡಾ. ಮನಮೋಹನ ಎಂ ಹಾಗೂ ಚುನಾವಣಾ ಅಧಿಕಾರಿ‌ ಡಾ.ಅರುಣ್ ಪ್ರಕಾಶ್ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳು ನಡೆಸಿಕೊಟ್ಟರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top