ಜ.4ರಂದು ಶ್ರೀರಾಮಚಂದ್ರಾಪುರ ಮಠದ ಶಾಸನತಂತ್ರ ಅಧಿವೇಶನ

Upayuktha
0

  • ಶ್ರೀಮಠದ ಸರ್ವ ಪದಾಧಿಕಾರಿಗಳ ಸಮಾವೇಶ
  • ಶ್ರೀಗಳ ಸಾನ್ನಿಧ್ಯ ಹಾಗೂ ಅಭ್ಯಾಗತರ ಸಮ್ಮುಖದಲ್ಲಿ ವಿಶೇಷ ಸಮಾವೇಶ




ಬೆಂಗಳೂರು: ಶ್ರೀರಾಮಚಂದ್ರಾಪುರ ಮಠದ ಆಡಳಿತ ವ್ಯವಸ್ಥೆಯ ಸರ್ವಪದಾಧಿಕಾರಿಗಳ ಸಮಾವೇಶ 'ಶಾಸನತಂತ್ರ ಅಧಿವೇಶನ'ವು ಭಾನುವಾರ 04-01-2026 ರಂದು ಗಿರಿನಗರದ ಶಾಖಾ ಮಠದಲ್ಲಿ ನಡೆಯಲಿದೆ. ಶಾಸನತಂತ್ರ ವ್ಯವಸ್ಥೆಯು ಶ್ರೀಮಠದ ಆಡಳಿತ ಜವಾಬ್ದಾರಿಯನ್ನು ಹೊತ್ತಿದ್ದು, ರಾಜ್ಯ ಹಾಗೂ ಹೊರ ರಾಜ್ಯಗಳ ಸಾವಿರಾರು ಪದಾಧಿಕಾರಿಗಳು ಈ ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ.



ಶ್ರೀರಾಮಚಂದ್ರಾಪುರಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ಈ ಅಧಿವೇಶನ ನಡೆಯಲಿದ್ದು, ನಾಡಿನ ಹಿರಿಯ ವಿದ್ವಾಂಸರಾದ ಘನಪಾಠಿ ಶಂಕರನಾರಾಯಣ ಭಟ್ಟರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸಂಬೋಧ ಕಾರ್ಯಕ್ರಮದಲ್ಲಿ ಮತ್ತೂರಿನ ವಿದ್ವಾಂಸರಾದ ಎಂ. ಎಸ್. ಸನತ್ ಕುಮಾರ್ ಅವರು ಪ್ರೇರಣಾದಾಯಕ ಮಾತುಗಳನ್ನು ಆಡಲಿದ್ದು, ಚಿಂತಕ ಚಕ್ರವರ್ತಿ ಸೂಲಿಬೆಲೆ ಉದ್ಬೋಧ ಕಾರ್ಯಕ್ರಮದಲ್ಲಿ ಸ್ಪೂರ್ತಿದಾಯಕ ಮಾತುಗಳನ್ನು ಆಡಲಿದ್ದಾರೆ. ವಾಗ್ಮಿಗಳು ಹಾಗೂ ಶ್ರೀಮಠದ ಯೋಜನಾ ಖಂಡದ ಸಂಯೋಜಕ ವಿದ್ವಾನ್ ಜಗದೀಶ ಶರ್ಮಾ ಸಂಪ ಮಾರ್ಗದರ್ಶನ ಮಾಡಲಿದ್ದಾರೆ.



ಶ್ರೀಮಠದ ಅಡಳಿತ ವ್ಯವಸ್ಥೆಯ ಕುರಿತಾಗಿ ಚಿಂತನ ಮಂಥನಗಳು ನಡೆಯಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಬೆಂಗಳೂರು ಸೇರಿದಂತೆ ರಾಜ್ಯದ ಹಲವಾರು ಪದಾಧಿಕಾರಿಗಳು ಹಾಗೂ ಕೇರಳ, ಮುಂಬೈ, ದೆಹಲಿ, ಚೆನೈ ಸೇರಿದಂತೆ ಹೊರ ರಾಜ್ಯಗಳಲ್ಲಿ ಇರುವ 5123 ಪದಾಧಿಕಾರಿಗಳು ಈ ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ.



ಸಂಜೆ ರಾಘವೇಂದ್ರ ಗುಬ್ಬಿ ಹಾಗೂ ತಂಡದಿಂದ ವಿಶಿಷ್ಟ ಅದ್ವೈತ ಸಂಗೀತ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ವ್ಯವಸ್ಥೆಯ ಎಲ್ಲಾ ಪದಾಧಿಕಾರಿಗಳು ಭಾಗವಹಿಸುವಂತೆ ಶಾಸತಂತ್ರದ ಅಧ್ಯಕ್ಷ ಮೋಹನ ಭಾಸ್ಕರ ಹೆಗಡೆ, ಪ್ರಶಾಸನಾಧಿಕಾರಿ ಸಂತೋಷ್ ಹೆಗಡೆ, ವಿತ್ತಾಧ್ಯಕ್ಷ ಗಣೇಶ್ ಜೆ.ಎಲ್ ಕೋರಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top