ಸುರತ್ಕಲ್: ಶಿಕ್ಷಕರು ಭಾರತದ ಉತ್ತಮ ನಾಗರೀಕರನ್ನು ರೂಪಿಸುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಾರೆ. ಅವರು ವಿದ್ಯಾರ್ಥಿಗಳಿಗೆ ಕೇವಲ ಪಾಠ ಪುಸ್ತಕದ ಜ್ಞಾನವನ್ನು ಅಷ್ಟೇ ಅಲ್ಲದೆ ನೈತಿಕ ಮೌಲ್ಯಗಳು ದೇಶಪ್ರೇಮ ಸಹಿಷ್ಣತೆ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಕಲಿಸುತ್ತಾರೆ ಎಂದು ಹಿಂದೂ ವಿದ್ಯಾದಾಯಿನಿ ಸಂಘದ ಅಧ್ಯಕ್ಷ ಜಯಚಂದ್ರ ಹತ್ವಾರ್ ನುಡಿದರು.
ಅವರು ಗೋವಿಂದ ದಾಸ ಕಾಲೇಜಿನ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಆಯೋಜಿಸಿದ "ಕರ್ತವ್ಯ ಬೋಧ್ ದಿವಸ್ " ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕುಟುಂಬ ಪ್ರಬೋಧನ ಕರ್ನಾಟಕ ದಕ್ಷಿಣ ಪ್ರಾಂತದ ಸಂಯೋಜಕ ನಾರಾವಿ ವೆಂಕಟೇಶ ಹೆಗ್ಡೆ, "ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ" ಎಂಬ ವಿಷಯದ ಬಗ್ಗೆ ಉಪನ್ಯಾಸವನ್ನು ನೀಡಿದರು. ಅವರು ಮಾತನಾಡಿ, ವಿದ್ಯಾರ್ಥಿಗಳ ಜೀವನದಲ್ಲಿ ಶಿಕ್ಷಕರು ಮಹತ್ವದ ಪಾತ್ರವನ್ನು ವಹಿಸುತ್ತಾರೆ ಧನಾತ್ಮಕ ಚಿಂತನೆಗಳನ್ನ ವಿದ್ಯಾರ್ಥಿಗಳಲ್ಲಿ ತುಂಬಿ ಬದುಕಿನ ದಾರಿಯನ್ನು ತೋರಿಸುತ್ತಾರೆ. ಈ ನಿಟ್ಟಿನಲ್ಲಿ ಭವಿಷ್ಯದ ರಾಷ್ಟ್ರ ನಿರ್ಮಾಣಕ್ಕೆ ಶಿಕ್ಷಕರ ಪಾತ್ರ ಅತ್ಯಂತ ಗಣನೀಯವಾದದ್ದು ಎಂದರು.
ಕಾರ್ಯಕ್ರಮದ ಅತಿಥಿ ಗೋವಿಂದ ದಾಸ ಕಾಲೇಜಿನ ಆಡಳಿತಾತ್ಮಕ ನಿರ್ದೇಶಕರಾದ ಪ್ರೊ. ರಮೇಶ್ ಭಟ್ ಎಸ್ ಜಿ, ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘ ನಿರ್ವಹಿಸುತ್ತಿರುವ ಕೆಲಸ ಶ್ಲಾಘನೀಯ ಇನ್ನಷ್ಟು ಸಮಾಜಮುಖಿ ಕೆಲಸಗಳು ಈ ಸಂಘದಿಂದ ನಡೆಯುವಂತಾಗಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಒಳಪಡುವ ಬೇರೆ ಬೇರೆ ಕಾಲೇಜುಗಳ ನಿವೃತ್ತ ಪ್ರಾಧ್ಯಾಪಕರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೋವಿಂದ ದಾಸ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಹರೀಶ್ ಆಚಾರ್ಯ ವಹಿಸಿದ್ದರು.
ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘದ ಜಂಟಿ ಕಾರ್ಯದರ್ಶಿ ಡಾ. ಮಾಧವ ಎಂ ಕೆ ಸ್ವಾಗತಿಸಿ ಪ್ರಸ್ತಾವನೆಗೈದರು. ಕಾರ್ಯಕ್ರಮದ ಸಂಯೋಜಕಿ ಗೋವಿಂದ ದಾಸ ಕಾಲೇಜಿನ ಉಪನ್ಯಾಸಕಿ ಡಾ. ಸುಧಾ ಯು ವಂದನಾರ್ಪಣೆಗೈದರು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘದ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಪದಾಧಿಕಾರಿಗಳು, ಗೋವಿಂದ ದಾಸ ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಗೋವಿಂದ ದಾಸ ಕಾಲೇಜಿನ ಕನ್ನಡ ಪ್ರಾಧ್ಯಾಪಕರಾದ ಡಾ. ಸಂತೋಷ್ ಆಳ್ವ ಕಾರ್ಯಕ್ರಮ ನಿರೂಪಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


