ಮರವಂತೆ ಗ್ರಾಮೋತ್ಸವ ಉದ್ಘಾಟನೆ

Upayuktha
0


ಉಡುಪಿ: ಸರಕಾರದಿಂದ ದೊರೆಯುವ ಸೌಲಭ್ಯಗಳ ಮಾಹಿತಿಯನ್ನು ಪ್ರತಿಯೊಬ್ಬರಿಗೂ ತಲುಪಿಸುವ ಉದ್ದೇಶದಿಂದ ವಿವಿಧ ಇಲಾಖೆಗಳಿಂದ ಉತ್ತಮವಾಗಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಆರೋಗ್ಯ ತಪಾಸಣೆ ಶಿಬಿರಗಳು ಹಾಗೂ ವಿವಿಧ ಇಲಾಖೆ ಯೋಜನೆಗಳ ಮಾಹಿತಿ ಲಭ್ಯತೆ ಸಾರ್ವಜನಿಕರಿಗೆ ಸಹಕಾರಿಯಾಗಲಿದೆ. ಮನೋರಂಜನೆಯ ಜೊತೆಗೆ ಸಂಜೀವಿನಿ ಸ್ವಸಹಾಯ ಸಂಘದ ಸದಸ್ಯರ ಉದ್ಯೋಗ ವ್ಯವಹಾರಗಳಿಗೆ ಉತ್ತಮ ವೇದಿಕೆ ಕಲ್ಪಿಸಿದಂತಾಗುತ್ತದೆ ಎಂದು  ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.


ಅವರು ಮಂಗಳವಾರ ಮರವಂತೆ ಗ್ರಾಮ ಪಂಚಾಯತ್ ವಠಾರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಡಾ.ಶಿವರಾಮ ಕಾರಂತಟ್ರಸ್ಟ್ ಹಾಗೂ ಮರವಂತೆ ಗ್ರಾಮ ಪಂಚಾಯತ್‍ ಇವರ ಸಹಯೋಗದಲ್ಲಿ ನಡೆದ ಮರವಂತೆ ಗ್ರಾಮೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ಡಾ.ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಶೆಟ್ಟಿ ಎಕ್ಕಾರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. 


ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಗ್ರಾಮ ಪಂಚಾಯತ್‍ನ ಅಧ್ಯಕ್ಷ ನಾಗಾರಾಜ್ ಪಠಗಾರ್, ಉಪಾಧ್ಯಕ್ಷೆ ಸುಶೀಲಾ ಪೂಜಾರಿ, ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯರಾದ ಡಾ.ಚೇತನ್ ಶೆಟ್ಟಿ ಕೋವಾಡಿ ಮತ್ತು ಡಾ.ಭಾರತಿ ಮರವಂತೆ,  ತೋಟಗಾರಿಕೆ ಇಲಾಖೆಯ ಪ್ರವೀಣ್,  ಗ್ರಾಮ ಪಂಚಾಯತ್ ನ ಸದಸ್ಯರು, ಪಂಚಾಯತ್‍ಅಭಿವೃದ್ಧಿ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. 


ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ರಂಗೋಲಿ ಹಾಗೂ ಚಿತ್ರಕಲಾ ಸ್ಪರ್ಧೆ, ಮರವಂತೆ ಗ್ರಾಮ ಪಂಚಾಯತ್ ವತಿಯಿಂದ ಗ್ರಾಮೀಣ ಕ್ರೀಡೋತ್ಸವ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮರವಂತೆ ವತಿಯಿಂದ ಸಾರ್ವಜನಿಕರಿಗೆ ಮತ್ತು ಶಾಲಾ ವಿದ್ಯಾರ್ಥಿಗಳಿಂದ ಪಾರಂಪರಿಕ ವಸ್ತು ಪ್ರದರ್ಶನ, ಕವಿಗೋಷ್ಠಿ, ಉಪನ್ಯಾಸ,  ಪಶು ಸಂಗೋಪನಾ ಇಲಾಖೆಯ ವತಿಯಿಂದ ಉಚಿತ ರೇಬಿಸ್ ಚುಚ್ಚು ಮದ್ದು ನೀಡುವುದು ಹಾಗೂ ಸಾಕು ಪ್ರಾಣಿಗಳ ಪ್ರದರ್ಶನ, ಆರೋಗ್ಯ ಇಲಾಖೆಯ ವತಿಯಿಂದ ಆರೋಗ್ಯ ಶಿಬಿರ ಮತ್ತುಕಣ್ಣಿನ ತಪಾಸಣೆ, ಕೃಷಿ ಇಲಾಖೆಯ ವತಿಯಿಂದ ಕೃಷಿ ಉತ್ಪನ್ನಗಳ ಪ್ರದರ್ಶನವು ನಡೆಯಿತು. 


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top