ಕರ್ಣಾಟಕ ಬ್ಯಾಂಕ್ ವತಿಯಿಂದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ ಬಸ್ಸ್ ಕೊಡುಗೆ

Upayuktha
0



ಧರ್ಮಸ್ಥಳ : ಕರ್ಣಾಟಕ ಬ್ಯಾಂಕ್ ವತಿಯಿಂದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ  ಎಸ್.ಎಮ್.ಎಲ್ ಕಂಪೆನಿಯ ಬಸ್ಸ್  ಕೊಡುಗೆಯಾಗಿ ನೀಡಲಾಯಿತು. ಕರ್ಣಾಟಕ ಬ್ಯಾಂಕ್ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಘವೇಂದ್ರ ಶ್ರೀನಿವಾಸ ಭಟ್ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ , ಧರ್ಮಸ್ಥಳದ ಧರ್ಮಾಧಿಕಾರಿ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗು ಡಾ. ಹೇಮಾವತಿ ವಿ ಹೆಗ್ಗಡೆಯವರ ಸಮ್ಮುಖದಲ್ಲಿ ಹಸ್ತಾಂತರಿಸಿದರು.


ಹಸ್ತಾಂತರದ ಬಳಿಕ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಬಸ್ಸನ್ನು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಸಮ್ಮುಖದಲ್ಲಿ ಎಸ್.ಡಿ.ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಉಪಯೋಗಕ್ಕಾಗಿ ನೀಡಿದರು.


ಇದೇ ಸಂದರ್ಭದಲ್ಲಿ ಹೆಗ್ಗಡೆಯವರು ಕರ್ಣಾಟಕ ಬ್ಯಾಂಕ್ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಘವೇಂದ್ರ ಶ್ರೀನಿವಾಸ ಭಟ್ ರವರಿಗೆ ಸ್ಮರಣಿಕೆ ನೀಡಿ ಅಭಿನಂದಿಸಿದರು. ಈ ವೇಳೆ ಕರ್ಣಾಟಕ ಬ್ಯಾಂಕ್  ಅಸಿಸ್ಟೆಂಟ್ ಮ್ಯಾನೇಜರ್ ( ಐಆರ್) ಶ್ರೀನಿವಾಸ್ ಮೂರ್ತಿ ಎಮ್, ಪುತ್ತೂರು ವಿಭಾಗದ ಕ್ಲಸ್ಟರ್ ಹೆಡ್ ಮತ್ತು ಮುಖ್ಯ ವ್ಯವಸ್ಥಾಪಕ ಶ್ರೀ ಹರಿ, ಉಜಿರೆ ಕರ್ನಾಟಕ ಬ್ಯಾಂಕ್ ಮ್ಯಾನೇಜರ್ ರಾಮಕೃಷ್ಣ ವಿ. ಯು , ಎಸ್.ಡಿ.ಎಂ  ಶಿಕ್ಷಣ ಸಂಸ್ಥೆಯ ಹಣಕಾಸು ಅಧಿಕಾರಿ ಅರವಿಂದ ಭಗವತ್ ಪಿ, ನಿಶ್ಚಿತ್ ಕುಮಾರ್ , ಪದವಿ ಪೂರ್ವ ಕಾಲೇಜಿನ ಉಪ ಪ್ರಾಚಾರ್ಯ ಡಾ. ರಾಜೇಶ್ ಬಿ, ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿ ಸೇರಿದಂತೆ ಎಸ್.ಎಮ್.ಎಲ್ ಕಂಪೆನಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.





ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಕೇಂದ್ರ ಕಛೇರಿಗೆ ಕರ್ಣಾಟಕ ಬ್ಯಾಂಕ್‌ ಎಂ.ಡಿ ಭೇಟಿ :

ಇದೇ ದಿನ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕೇಂದ್ರ ಕಛೇರಿಗೆ ಕರ್ಣಾಟಕ ಬ್ಯಾಂಕ್ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಘವೇಂದ್ರ ಶ್ರೀನಿವಾಸ ಭಟ್ ಭೇಟಿ  ಹೊಸ ವರ್ಷದ ಶೈಕ್ಷಣಿಕ ಚಟುವಟಿಕೆಗೆ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಕರ್ಣಾಟಕ ಬ್ಯಾಂಕ್  ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಘವೇಂದ್ರ ಶ್ರೀನಿವಾಸ ಭಟ್‌ರವರಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವತಿಯಿಂದ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಅಭಿನಂದಿಸಿದರು.




Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top