ರಾಜ್ಯಪಾಲರನ್ನ ಭೇಟಿಯಾದ ಕರ್ನಾಟಕ ಪತ್ರಕರ್ತರ ಸಂಘದ ನಿಯೋಗ

Upayuktha
0


ಬಳ್ಳಾರಿ: ಬಳ್ಳಾರಿಯಲ್ಲಿ ಫೆ 20 ರಂದು ನಡೆಯಲಿರುವ ರಾಷ್ಟ್ರೀಯ ಪತ್ರಕರ್ತರ ಸಮ್ಮೆಳನ ಉದ್ಘಾಟಿಸಲಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ 


ಬೆಂಗಳೂರು ಜ 08. ಗಣಿನಗರಿ ಬಳ್ಳಾರಿಯಲ್ಲಿ ಮುಂಬರುವ ಫೆಬ್ರವರಿ 19 ಮತ್ತು 20 ರಂದು ನಗರದಲ್ಲಿ ಎರಡು ದಿನಗಳ ಕಾಲ ನಡೆಯುವ ರಾಷ್ಟ್ರೀಯ ಪತ್ರಕರ್ತರ ಸಮ್ಮೇಳನವನ್ನು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರವರು ಉದ್ಘಾಟಿಸಲಿದ್ದಾರೆ ಎಂದು ಕರ್ನಾಟಕ ಪತ್ರಕರ್ತರ ಸಂಘದ ಬಳ್ಳಾರಿ ಜಿಲ್ಲಾಧ್ಯಕ್ಷ ಯಾಳ್ಪಿ ವಲಿಭಾಷರವರು ತಿಳಿಸಿದರು.


 ರಾಜಭವನದಲ್ಲಿ ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಮುರುಗೇಶ್ ಬಿ.ಶಿವಪೂಜಿರವರ ನೇತೃತ್ವದ ನಿಯೋಗದಲ್ಲಿ ರಾಜ್ಯಪಾಲರನ್ನ ಭೇಟಿಯಾಗಿ ಕಾರ್ಯಕ್ರಮಕ್ಕೆ ಆಹ್ವಾನಿಸಿದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.


ಬಳ್ಳಾರಿಯಲ್ಲಿ ಮುಂಬರುವ ಫೆಬ್ರವರಿಯಲ್ಲಿ ಐತಿಹಾಸಿಕ ಪತ್ರಕರ್ತರ ರಾಷ್ಟ್ರೀಯ ಸಮ್ಮೇಳನ ನಡೆಯಲಿದ್ದು, ಈ ಸಮ್ಮೇಳನದಲ್ಲಿ ದೇಶದ 15 ರಿಂದ 18 ರಾಜ್ಯಗಳ ಪತ್ರಕರ್ತ  ಪ್ರತಿನಿಧಿಗಳು ಸುಮಾರು 500 ಜನ ಭಾಗವಹಿಸಲಿದ್ದು, ಎರಡು ದಿನಗಳ ಕಾಲ ಸಮ್ಮೇಳನ ಬಳ್ಳಾರಿ ನಗರದಲ್ಲಿ ಅದ್ಧೂರಿಯಾಗಿ ಜರುಗಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನ ರಾಜ್ಯಪಾಲರು ಮಾಡಲಿದ್ದು, ಮುಖ್ಯ ಅಥಿತಿಗಳಾಗಿ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಭಾಗವಹಿಸುತ್ತಿದ್ದು ಬಳ್ಳಾರಿಯಲ್ಲಿ ಎರಡು ದಿನಗಳ ಕಾಲ ಪತ್ರಕರ್ತರ ಹಬ್ಬ ನಡೆಯಲಿದೆ ಎಂದರು. 


ಫೆಬ್ರುವರಿ 19 ರಂದು ಮಧ್ಯಾಹ್ನ 3 ಗಂಟೆಯಿಂದ ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ರಾಜ್ಯ ಸಮಿತಿ ಸದಸ್ಯರನ್ನೊಳಗೊಂಡ ಎಲ್ಲಾ ಪದಾಧಿಕಾರಿಗಳು ಭಾಗವಹಿಸಲು ಫೆಬ್ರುವರಿ 20 ರಂದು ರಾಷ್ಟ್ರೀಯ ಸಮ್ಮೇಳನ ನಡೆಯಲಿದ್ದು ದೇಶದ ಆನೇಕ ರಾಜ್ಯಗಳ ಹಲವು ಖ್ಯಾತ ಪತ್ರಕರ್ತರು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಎಂದು ಯಾಳ್ಪಿ ವಲಿಭಾಷ ತಿಳಿಸಿದರು.


ಈ ಸಂದರ್ಭದಲ್ಲಿ ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಮುರುಗೇಶ್ ಬಿ ಶಿವುಪೂಜಿ, ಸಂಘದ ರಾಜ್ಯ ಉಪಾಧ್ಯಕ್ಷ ಮಂಗಳೂರು ಸುರೇಶ್, ಬಳ್ಳಾರಿ ಜಿಲ್ಲಾ ಉಪಾಧ್ಯಕ್ಷ ಕೆ.ಬಜಾರಪ್ಪ, ಸೇರಿದಂತೆ ರಾಜ್ಯ ಪದಾಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.




ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top