ಕಾಸರಗೋಡು: ಸೀತಮ್ಮ ಪುರುಷ ನಾಯಕ ಸ್ಮಾರಕ, ಕನ್ನಡ ಭವನ ಮತ್ತು ಗ್ರಂಥಾಲಯದ ಆಶ್ರಯದಲ್ಲಿ ಕನ್ನಡ ಭವನದ ರಜತ ಸಂಭ್ರಮ ನಾಡು–ನುಡಿ ಹಬ್ಬ ಸಮಾರಂಭವು ಕನ್ನಡ ಭವನದ ಶ್ರೀ ಕೃಷ್ಣದೇವರಾಯ ವೇದಿಕೆಯಲ್ಲಿ ಅದ್ದೂರಿಯಾಗಿ ಜರುಗಿತು. ಡಾ. ಕೆ.ಎನ್. ವೆಂಕಟರಮಣ ಹೊಳ್ಳ ಅವರು ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸಮಾರಂಭದಲ್ಲಿ ಕನ್ನಡ ಭವನದ ಪದಾಧಿಕಾರಿಗಳು ಹಾಗೂ ಅನೇಕ ಗಣ್ಯರು ಪಾಲ್ಗೊಂಡು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಗಡಿನಾಡ ಸಾಂಸ್ಕೃತಿಕ ಕಲಾ ವೇದಿಕೆ (ರಿ.), ಕಾಸರಗೋಡು ಸಂಸ್ಥೆಯ ವತಿಯಿಂದ ಸಾಂಸ್ಕೃತಿಕ ಕಲಾ ವೈಭವ ವರ್ಣರಂಜಿತವಾಗಿ ನಡೆಯಿತು. ಗುರುರಾಜ್ ಕಾಸರಗೋಡು ಅವರ ಸಂಯೋಜನೆ ಮತ್ತು ನಿರೂಪಣೆಯಲ್ಲಿ ಸಂಸ್ಥೆಯ ಕಲಾವಿದರು ನೃತ್ಯ, ಸಂಗೀತ ಸೇರಿದಂತೆ ವಿವಿಧ ಕಲಾ ಪ್ರದರ್ಶನಗಳ ಮೂಲಕ ಪ್ರೇಕ್ಷಕರನ್ನು ಮನರಂಜಿಸಿದರು.
ಕಾರ್ಯಕ್ರಮದ ಅಂತ್ಯದಲ್ಲಿ ಭಾಗವಹಿಸಿದ ಕಲಾವಿದರಿಗೆ ಗೌರವ ಸ್ಮರಣಿಕೆಗಳು ಹಾಗೂ ಅಭಿನಂದನಾ ಪತ್ರಗಳನ್ನು ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಗುರುರಾಜ್ ಕಾಸರಗೋಡು ಅವರಿಗೆ ರಜತ ಸಂಭ್ರಮ ಗೌರವ ಸನ್ಮಾನ ಹಾಗೂ ಸಂಸ್ಥೆಯ ಕಲಾವಿದ ಹನ್ಶಿತ್ ಆಳ್ವ ಅವರಿಗೆ ಕನ್ನಡ ಪಯಸ್ವಿನಿ ಅಚೀವ್‌ಮೆಂಟ್ ಅವಾರ್ಡ್ ನೀಡಿ ಗೌರವಿಸಲಾಯಿತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


