ಕಾಸರಗೋಡು: ಉಮೇಶ ಮುಂಡಳ್ಳಿಗೆ 'ಕನ್ನಡ ಪಯಸ್ವಿನಿ ಸಾಧನಾ ಪ್ರಶಸ್ತಿ' ಪ್ರದಾನ

Upayuktha
0


ಕಾಸರಗೋಡು: ಉತ್ತರ ಕನ್ನಡ ಜಿಲ್ಲೆಯ ಪ್ರತಿಭಾನ್ವಿತ ಲೇಖಕರು ಗಾಯಕರಾದ ಉಮೇಶ ಮುಂಡಳ್ಳಿ ಅವರಿಗೆ ಕೇರಳ ಕಾಸರಗೋಡು ಕನ್ನಡ ಭವನದ 2026 ನೇ ಸಾಲಿನ ಪ್ರತಿಷ್ಠಿತ ಅಂತರ್ ರಾಜ್ಯ "ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್" ಭಾನುವಾರ ಪ್ರದಾನ ಮಾಡಲಾಯಿತು.


ಕಾಸರಗೋಡು ಕನ್ನಡ ಭವನದಲ್ಲಿ ಭಾನುವಾರ ನಡೆದ ಕನ್ನಡ ಭವನ ರಜತ ಸಂಭ್ರಮ ಕಾರ್ಯಕ್ರಮದಲ್ಲಿ ಕೇರಳ ಹಾಗೂ ಕರ್ನಾಟಕದ ಅನೇಕ ಸಾಧಕರೊಡನೆ ಸಾಹಿತ್ಯ ಸಂಗೀತ ಮತ್ತು ಕಲಾ ಕ್ಷೇತ್ರದಲ್ಲಿ ಎರಡು ದಶಕಕ್ಕೂ ಹೆಚ್ಚು ಕಾಲ ಸಲ್ಲಿಸಿದ ಗಣನೀಯ ಸೇವೆಯನ್ನು ಪರಿಗಣಿಸಿ ಉಮೇಶ ಮುಂಡಳ್ಳಿ ಭಟ್ಕಳ ಇವರಿಗೂ ಪ್ರಶಸ್ತಿ ಪ್ರದಾನ ಮಾಡಲಾಯಿತು.


ಕನ್ನಡದ ಭವನದ ಸಂಸ್ಥಾಪಕ ಅಧ್ಯಕ್ಷ ಡಾ ವಾಮನ್ ರಾವ್ ಬೇಕಲ್ ಹಾಗೂ ಚುಟುಕು ಸಾಹಿತ್ಯ ಪರಿಷತ್ತಿನ ಸಂಸ್ಥಾಪಕ ಡಾ.ಎಂ.ಜಿ.ಆರ್. ಅರಸು ಮೈಸೂರು ಅವರು ಶ್ರೀ ಕೃಷ್ಣದೇವರಾಯ ವೇದಿಕೆಯಲ್ಲಿ ಗಣ್ಯರ ಸಮ್ಮುಖದಲ್ಲಿ ಮುಂಡಳ್ಳಿ ಅವರನ್ನು ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಕೌಸ್ತುಭ ಪತ್ರಿಕೆ ಸಂಪಾದಕರಾದ ರತ್ನಾ ಹಾಲಪ್ಪ ಗೌಡ ಮೈಸೂರು, ಕನ್ನಡ ಭವನದ ಕಾರ್ಯದರ್ಶಿ ವಸಂತ ಕೆರೆಮನೆ, ಡಾ.ಕೆ.ಎಸ್. ವೆಂಕಟರಮಣ ಹೊಳ್ಳ, ಸಂಧ್ಯಾರಾಣಿ ಬೇಕಲ್, ಅರಿಬೈಲು ಗೋಪಾಲ ಶೆಟ್ಟಿ ಮೊದಲಾದ ಗಣ್ಯರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top