ಜ.25: ಕರಾವಳಿ ಉತ್ಸವದ ಆಕರ್ಷಣೆಯಾಗಿ ‘ಕುಡ್ಲ ಶ್ವಾನ ಪ್ರದರ್ಶನ’

Upayuktha
0



ಮಂಗಳೂರು: ಕರಾವಳಿ ಉತ್ಸವದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ‘ಕುಡ್ಲ ಶ್ವಾನ ಪ್ರದರ್ಶನ’ ಎಂಬ ವಿಶೇಷ ಹಾಗೂ ಆಕರ್ಷಕ ಕಾರ್ಯಕ್ರಮವನ್ನು ಜನವರಿ 25, 2026 (ಭಾನುವಾರ) ಮಧ್ಯಾಹ್ನ 2 ಗಂಟೆಗೆ ಮಂಗಳೂರಿನ ಕರಾವಳಿ ಉತ್ಸವ ಮೈದಾನ, ಲಾಲ್‌ಬಾಗ್‌ನಲ್ಲಿ ಆಯೋಜಿಸಲಾಗಿದೆ.


ಶ್ವಾನಪ್ರಿಯರು, ಸಾರ್ವಜನಿಕರು ಹಾಗೂ ಕುಟುಂಬ ಸಮೇತರಾಗಿ ಭಾಗವಹಿಸಬಹುದಾದ ಈ ವಿಶಿಷ್ಟ ಪ್ರದರ್ಶನವು ಕರಾವಳಿ ಉತ್ಸವದ ಪ್ರಮುಖ ಆಕರ್ಷಣೆಯಾಗಿ ರೂಪುಗೊಂಡಿದೆ. ವಿವಿಧ ಜಾತಿಯ ಶ್ವಾನಗಳ ಪ್ರದರ್ಶನದ ಮೂಲಕ ಶ್ವಾನ ಪಾಲನೆಯ ಮಹತ್ವ, ಆರೋಗ್ಯ ಸಂರಕ್ಷಣೆ ಹಾಗೂ ಪಶು ಕಲ್ಯಾಣ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.


ಕಾರ್ಯಕ್ರಮವನ್ನು ಕರ್ನಾಟಕ ವಿಧಾನಸಭೆಯ ಅಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಉದ್ಘಾಟಿಸಲಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ಶ್ರೀ ದಿನೇಶ್ ಗುಂಡೂರಾವ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.


ಪಶುಸಂಗೋಪನೆ ಮತ್ತು ರೇಷ್ಮೆ ಕೃಷಿ ಸಚಿವರಾದ ವೆಂಕಟೇಶ್ ಅವರು ಗೌರವ ಉಪಸ್ಥಿತರಾಗಿ ಭಾಗವಹಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಿ. ವೇದವ್ಯಾಸ ಕಾಮತ್ ಅವರು ವಹಿಸಲಿದ್ದಾರೆ.


ಕಾರ್ಯಕ್ರಮದಲ್ಲಿ ಲೋಕಸಭಾ ಸದಸ್ಯರು, ಶಾಸಕರು, ವಿಧಾನಪರಿಷತ್ ಸದಸ್ಯರು, ವಿವಿಧ ನಿಗಮ–ಪ್ರಾಧಿಕಾರಗಳ ಅಧ್ಯಕ್ಷರು, ಸಾಹಿತ್ಯ ಅಕಾಡೆಮಿಗಳ ಅಧ್ಯಕ್ಷರು, ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದಾರೆ.


ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಪೊಲೀಸ್ ಆಯುಕ್ತರು, ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.


ಕರಾವಳಿ ಉತ್ಸವಕ್ಕೆ ಹೊಸ ಆಯಾಮ ನೀಡುವ ‘ಕುಡ್ಲ ಶ್ವಾನ ಪ್ರದರ್ಶನ’ವನ್ನು ಯಶಸ್ವಿಗೊಳಿಸಲು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಜಿಲ್ಲಾಡಳಿತ ಮತ್ತು ಪಶುಪಾಲನೆ–ಪಶುವೈದ್ಯಕೀಯ ಇಲಾಖೆ ಮನವಿ ಮಾಡಿವೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top