ಪುತ್ತೂರು: 33ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕರೆ ಕಂಬಳವು ಜ. 24ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ದೇವಮಾರು ಗದ್ದೆಯಲ್ಲಿ ನಡೆಯಿತು.
ಕಂಬಳದ ಸಂದರ್ಭದಲ್ಲಿ ಜೇನು ಕೃಷಿ, ಪರಿಸರ ಸಂರಕ್ಷಣೆ ಹಾಗೂ ಕೃಷಿ ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಕುಮಾರ್ ಪೆರ್ನಾಜೆ ಅವರನ್ನು ಸನ್ಮಾನಿಸಲಾಯಿತು. ಸಮಾರಂಭದ ಅಧ್ಯಕ್ಷರಾದ ಶಾಸಕರಾದ ಅಶೋಕ್ ಕುಮಾರ್ ರೈ ಅವರು ಶಾಲು–ಪೇಟ ಹೊದಿಸಿ ಸನ್ಮಾನ ಪತ್ರ ನೀಡಿ ಗೌರವಿಸಿದರು. ಕಂಬಳ ಸಮಿತಿಯ ಗೌರವಾಧ್ಯಕ್ಷ ವಿನಯ್ ಕುಮಾರ್ ಸೊರಕೆ ಅವರು ಹಣ್ಣು–ಹಂಪಲು ನೀಡಿ ಅಭಿನಂದಿಸಿದರು. ಪ್ರಧಾನ ಕಾರ್ಯದರ್ಶಿ ದಿನೇಶ್ ಕುಲಾಲ್ ಪಿ.ವಿ. ಸನ್ಮಾನ ಪತ್ರವಾಚಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಶಕುಂತಲಾ ಟಿ. ಶೆಟ್ಟಿ, ಕಂಬಳ ಸಮಿತಿ ಕೋಶಾಧಿಕಾರಿ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ತೀರ್ಪುಗಾರ ಗುಣಪಾಲ ಕಡಂಬ, ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ದ.ಕ. ಜಿಲ್ಲಾ ಕಾಂಗ್ರೆಸ್ ವಕ್ತಾರ ಮಹಮ್ಮದ್ ಬಡಗನ್ನೂರು, ರಾಜ್ಯ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಮೌರಿಸ್ ಮಸ್ಕರೆನಸ್, ಕೆಪಿಸಿಸಿ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್, ಜಿಲ್ಲಾ ಸೆಷನ್ಸ್ ನ್ಯಾಯಾಧೀಶೆ ಸರಿತ, ನ್ಯಾಯಾಧೀಶೆ ಪ್ರಕೃತಿ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಮಹಮ್ಮದ್ ಅಲಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ಚಲನಚಿತ್ರ ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ಕೋಟಿ ಚೆನ್ನಯ ಕಂಬಳ ಸಮಿತಿಯ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಕಾರ್ಯಕ್ರಮವನ್ನು ವಸಂತಕುಮಾರ್ ರೈ ದುಗ್ಗಳ ಹಾಗೂ ನಿರಂಜನ ರೈ ಮಠಂತಬೆಟ್ಟು ನಿರೂಪಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


