ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ), ಉಜಿರೆಯ ಸಸ್ಯಶಾಸ್ತ್ರ ವಿಭಾಗದ ವತಿಯಿಂದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಪುದುವೆಟ್ಟು ಇಲ್ಲಿ Lab in Cab ಕಾರ್ಯಕ್ರಮವನ್ನು ಜನವರಿ 13 ರಂದು ಹಮ್ಮಿಕೊಳ್ಳಲಾಯಿತು. ಶಾಲೆಯ 6 ಮತ್ತು 7ನೇ ತರಗತಿಯಲ್ಲಿ ಕಲಿಯುತ್ತಿರುವ 30 ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಪ್ರಯೋಜನವನ್ನು ಪಡೆದರು.
ಸಸ್ಯಶಾಸ್ತ್ರಕ್ಕೆ ಸಂಬಂಧಿಸಿದಂತೆ ಏಕದಳ ಹಾಗೂ ದ್ವಿದಳ ಸಸ್ಯಗಳ ಕಾಂಡದ ಒಳ ವಿನ್ಯಾಸ ಹಾಗೂ ಬಾಷ್ಪೀಕರಣ ಪ್ರಕ್ರಿಯೆಯನ್ನು ಪ್ರಾಯೋಗಿಕವಾಗಿ ವಿದ್ಯಾರ್ಥಿಗಳಿಗೆ ಪ್ರದರ್ಶಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಶೀನಪ್ಪ ಗೌಡ ಅವರು ಉಪಸ್ಥಿತರಿದ್ದು, ಶುಭಹಾರೈಸಿದರು.
ಸಸ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿಯರಾದ ಶಕುಂತಲಾ ಬಿ ಹಾಗೂ ಭವ್ಯ ಡಿ ನಾಯಕ್ ಕಾರ್ಯಕ್ರಮವನ್ನು ಆಯೋಜಿಸಿದರು. ಸಸ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಾದ ಪ್ರಥಮ್, ವಿಜಿತಾ, ಸೌಮ್ಯ ಹಾಗೂ ಭವಿಷ್ಯ ಇವರು ಸಹಕರಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


