ಉಜಿರೆ: ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನ ರೋವರ್ ಸ್ಕೌಟ್ ಲೀಡರ್ ಹಾಗೂ ಭೌತ ಶಾಸ್ತ್ರ ಉಪನ್ಯಾಸಕ ಲಕ್ಷ್ಮೀಶ ಭಟ್ ಇವರು ರೋವರ್ ಸ್ಕೌಟ್ ವಿಭಾಗದ ಉನ್ನತ ಹಂತದ ತರಬೇತಿಯಾದ ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ ಪಡೆದಿದ್ದಾರೆ.
ಇವರು ಸೆ. 24 ರಿಂದ 30 ರ ವರೆಗೆ ದೊಡ್ಡಬಳ್ಳಾಪುರದ ದಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಕೇಂದ್ರದಲ್ಲಿ, ರೋವರ್ ವಿಭಾಗದ ಲೀಡರ್ ಟ್ರೈನರ್ ರಾಜೇಶ್ ಅವಲಕ್ಕಿ ಇವರ ಶಿಬಿರ ನಾಯಕತ್ವದಲ್ಲಿ ತರಬೇತಿಯನ್ನು ಪಡೆದಿದ್ದರು. ಕಾಲೇಜಿನ ಪ್ರಾಚಾರ್ಯರಾದ ಪ್ರಮೋದ್ ಕುಮಾರ್ ಬಿ ಹಾಗೂ ಡಾ. ರಾಜೇಶ್ ಬಿ ಇವರು ಲಕ್ಷ್ಮೀಶ ಭಟ್ ಇವರಿಗೆ ಶುಭ ಹಾರೈಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


