ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್ ವಾರ್ಡನ್‌ಗಳಿಗೆ ಜೀವನ ಕೌಶಲ್ಯ ತರಬೇತಿ ಕಾರ್ಯಾಗಾರ

Upayuktha
0

 



ಬೆಂಗಳೂರು: ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ಸಹಯೋಗದೊಂದಿಗೆ ನಿಮ್ಹಾನ್ಸ್ ನ ಜನ ಆರೋಗ್ಯ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಡಾ.ಪ್ರದೀಪ್.ಬಿ.ಎಸ್ ರವರ ನೇತೃತ್ವದಲ್ಲಿ ಬೆಂಗಳೂರಿನ ಬನಶಂಕರಿಯ ವಿದ್ಯಾರ್ಥಿ ನಿಲಯದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್ ವಾರ್ಡನ್‌ಗಳಿಗೆ 3 ದಿನಗಳ ಕಾಲ ಜೀವನ ಕೌಶಲ್ಯ ತರಬೇತಿ ಕಾರ್ಯಾಗಾರವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಯಿತು.


ಈ ಕಾರ್ಯಾಗಾರದಲ್ಲಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಕ್ಷೇತ್ರಗಳಲ್ಲಿ ಹಾಸ್ಟೆಲ್ ವಾರ್ಡನ್‌ಗಳ ಸಾಮರ್ಥ್ಯ ವೃದ್ಧಿ ಮತ್ತು ವಿದ್ಯಾರ್ಥಿಗಳೊಂದಿಗೆ ಪರಿಣಾಮಕಾರಿಯಾದ ಸಂವಹನ ಬೆಳೆಸುವ ಕೌಶಲ್ಯಗಳನ್ನು ತರಬೇತಿ ನೀಡಲಾಯಿತು. ಕಾರ್ಯಾಗಾರದಲ್ಲಿ ನಿಮ್ಹಾನ್ಸ್ ನ ಜೀವನ ಕೌಶಲ್ಯ ಕಾರ್ಯಕ್ರಮದ  ಶ್ರೀವಿದ್ಯಾ, ಸ್ವಾತಿ ಸಹನ ಹಾಗೂ ಇತರ ಪರಿಣಿತರನ್ನೊಳಗೊಂಡ ತಂಡವು ತರಬೇತಿ ನೀಡಿದ್ದು, ಸಂವಾದಾತ್ಮಕ ಕಲಿಕೆ, ಗುಂಪು ಚಟುವಟಿಕೆ, ಕೇಸ್‌ ಸ್ಟಡಿ ಹಾಗೂ ಕ್ಷೇತ್ರ ಅನುಭವ ಹಂಚಿಕೆ ಒಳಗೊಂಡಿತ್ತು.


ಇದೇ ಸಂದರ್ಭದಲ್ಲಿ ಜೀವನ ಕೌಶಲ್ಯ ಹಾಗೂ ಯುವಸ್ಪಂದನ ಯೋಜನೆಯ ಬೆಂಗಳೂರು ವಿಭಾಗದ ಕ್ಷೇತ್ರ ಸಂಪರ್ಕ ಅಧಿಕಾರಿ ಪೂಜಾ ಸಿದ್ದಿಯವರು ಯುವಸ್ಪಂದನ ಅರಿವು ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಯುವ ಸಮುದಾಯದ ಮಾನಸಿಕ ಆರೋಗ್ಯ, ಸಹಾಯಕ್ಕೆ ಬೆಂಬಲ ಪಡೆಯುವಿಕೆ, ಭಾವನಾತ್ಮಕ ನಿಯಂತ್ರಣ ಹಾಗೂ ಒತ್ತಡ ನಿರ್ವಹಣೆ ಮೊದಲಾದ ವಿಷಯಗಳ ಕುರಿತು ಇದೆ ಸಂದರ್ಭದಲ್ಲಿ ಚರ್ಚಿಸಲಾಯಿತು. 3 ದಿನಗಳ ಈ ತರಬೇತಿಯ ಮೂಲಕ ಹಾಸ್ಟೆಲ್ ವಾರ್ಡನ್‌ಗಳ ಸೇವಾ ಸಮರ್ಥತೆ ಹೆಚ್ಚಿಸುವುದು, ವಿದ್ಯಾರ್ಥಿಗಳ ಸವಾಲುಗಳನ್ನು ಮನೋವೈಜ್ಞಾನಿಕ ದೃಷ್ಟಿಕೋನದಿಂದ ಅರ್ಥಮಾಡಿಕೊಳ್ಳುವಲ್ಲಿ ಸಹಾನುಭೂತಿಯನ್ನು ಬೆಳೆಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು. ತರಬೇತಿ ಅಂತ್ಯದಲ್ಲಿ ಭಾಗವಹಿಸಿದವರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡು ಕಾರ್ಯಕ್ರಮ ಉಪಯುಕ್ತವಾಗಿರುವುದಾಗಿ ಅಭಿಪ್ರಾಯ ವ್ಯಕ್ತಪಡಿಸಿದರು.


ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಪ್ರದೀಪ್. ಬಿ.ಎಸ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬೆಂಗಳೂರು ಜಿಲ್ಲಾ ಅಧಿಕಾರಿ ವಿನೋದ್, ಯುವ ಸ್ಪಂದನ ಯೋಜನೆಯ ರಾಜ್ಯ ಸಂಪರ್ಕ ಅಧಿಕಾರಿ ಶ್ರೀನಿವಾಸ್ ಪ್ರಸಾದ್ ಹಾಗೂ ನಿಮ್ಹಾನ್ಸ್ ನ ಜನ ಆರೋಗ್ಯ ವಿಭಾಗದ ಯುವ ಸ್ಪಂದನ ಮತ್ತು ಜೀವನ ಕೌಶಲ್ಯ ಯೋಜನೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top