ಡಾ. ಟಿ ಎನ್‌ ನಾಗರತ್ನ ಜೀವಮಾನ ಸಾಧನೆ ಪ್ರಶಸ್ತಿಗೆ ಭಾಜನ

Upayuktha
0

ಮೈತ್ರೇಯಿ ಕನ್ನಡ ಮಹಿಳಾ ಹರಿದಾಸ ಟ್ರಸ್ಟ್‌ ವತಿಯಿಂದ ಪ್ರದಾನ




ಬೆಂಗಳೂರು: ಸ್ವತಃ ಹಿರಿಯ ಮಹಿಳಾ ಹರಿದಾಸರಾದ, ಹರಿದಾಸ ಸಾಹಿತ್ಯದ ಸಂಶೋಧಕರಾದ, ಮೈಸೂರು ವಿಶ್ವವಿದ್ಯಾಲಯದ ಹರಿದಾಸ ವಿಭಾಗದ ಮುಖ್ಯಸ್ಥರಾಗಿ ನಿವೃತ್ತರಾದ, ಮೈಸೂರು ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಮೊದಲ ಡಾಕ್ಟರೇಟ್‌ ಪಡೆದವರಾದ, ಪದವಿ ಹಾಗೂ ಸ್ನಾತಕೋತ್ತರ ಪದವಿಗಳಲ್ಲಿ ಚಿನ್ನದ ಪದಕ ಪಡೆದ ಡಾ. ಟಿ ಎನ್‌ ನಾಗರತ್ನ ಇವರಿಗೆ ಮೈತ್ರೇಯಿ ಕನ್ನಡ ಮಹಿಳಾ ಹರಿದಾಸ ಟ್ರಸ್ಟ ನ ವತಿಯಿಂದ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಸಂಘದ ಉಪಾಧ್ಯಕ್ಷರಾದ ಡಾ. ಶಾಂತಾ ರಘೋತ್ತಮ ಅವರು, ಸೌಭಾಗ್ಯವನ್ನು ಹಾರೈಸಿ, ಮೊರದಬಾಗಿನದೊಂದಿಗೆ ಪ್ರಶಸ್ತಿ ನೀಡಿದರು. ಇದೇ ಸಮಯದಲ್ಲಿ, ಡಾ. ಶೀಲಾ ದಾಸ್‌ ಅವರು ಶ್ರೀಮತಿ ನಾಗರತ್ನ ಇವರ ಕುರಿತಾಗಿ ಮಾತನಾಡಿದರು, ಟ್ರಸ್ಟ್‌ ನ ಪ್ರಧಾನ ಕಾರ್ಯದರ್ಶಿಗಳಾದ ಡಾ.ವೃಂದಾ ಸಂಗಮ್‌ ಹಾಗೂ ಖಜಾಂಚಿಯಾದ ಡಾ. ವಿದ್ಯಾಶ್ರೀ ಕುಲಕರ್ಣಿ ಮಾನವಿ ಹಾಗೂ ಸದಸ್ಯರು ಸಮಾರಂಭದಲ್ಲಿ ಹಾಜರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top