ಮೆಸ್ಕಾಂ: ಕರ್ತವ್ಯದ ವೇಳೆ ಮೃತಪಟ್ಟ ಸಿಬ್ಬಂದಿ ಕುಟುಂಬಕ್ಕೆ 1 ಕೋಟಿ ರೂ. ಮೊತ್ತದ ವಿಮಾ ಚೆಕ್ ವಿತರಣೆ

Upayuktha
0


ಮಂಗಳೂರು: ಬೆಳ್ತಂಗಡಿ ಮೆಸ್ಕಾಂ ಶಾಖಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೆಸ್ಕಾಂ ಉದ್ಯೋಗಿ ವಿಜೇಶ್ ಕುಮಾ‌ರ್ ಅವರು ಕರ್ತವ್ಯ ನಿರತ ಸಂದರ್ಭದಲ್ಲಿ ಸಂಭವಿಸಿದ ವಿದ್ಯುತ್ ಅಪಘಾತದಲ್ಲಿ ಮೃತಪಟ್ಟಿದ್ದು, ಅವರ ಅವಲಂಬಿತರಿಗೆ 1 ಕೋಟಿ ರೂ. ಮೊತ್ತದ ವಿಮಾ ಚೆಕ್ಕನ್ನು ಜನವರಿ 6 ರಂದು ಮೆಸ್ಕಾಂ ಕಾರ್ಪೊರೇಟ್ ಕಚೇರಿಯಲ್ಲಿ ವಿತರಿಸಲಾಯಿತು. ಕೆನರಾ ಬ್ಯಾಂಕ್‌ನಲ್ಲಿ ವೇತನ ಉಳಿತಾಯ ಖಾತೆ ಹೊಂದುವ ಮೆಸ್ಕಾಂನಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಸಿಬಂದಿಗಳಿಗೆ ವೈಯಕ್ತಿಕ ಗುಂಪು ಅಪಘಾತ ವಿಮಾ ಸೌಲಭ್ಯವನ್ನು ನೀಡಲಾಗುತ್ತಿದೆ.


ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹಾಗೂ ವ್ಯವಸ್ಥಾಪಕ ನಿರ್ದೇಶಕ ಜಯಕುಮಾ‌ರ್ ಆರ್, ಕೆನರಾ ಬ್ಯಾಂಕ್ ಮಂಗಳೂರು ವೃತ್ತದ ಮಹಾ ಪ್ರಬಂಧಕ ಮಂಜುನಾಥ್ ಸಿಂಘೈ ಅವರು ಚೆಕ್ಕನ್ನು ಮೃತರ ತಾಯಿ ಶ್ರೀಮತಿ ಪೂರ್ಣಿಮಾ ಅವರಿಗೆ ಹಸ್ತಾಂತರಿಸಿದರು.


ಮೆಸ್ಕಾಂ ತಾಂತ್ರಿಕ ನಿರ್ದೇಶಕ ಹರೀಶ್ ಕುಮಾರ್ ವಿ, ಮುಖ್ಯ ಆರ್ಥಿಕ ಅಧಿಕಾರಿ ಮುರಳೀಧರ ನಾಯಕ್, ಅರ್ಥಿಕ ಸಲಹೆಗಾರ ದೇವರಾಜ್, ಪ್ರಧಾನ ವ್ಯವಸ್ಥಾಪಕ ಡಾ. ಮಂಜುನಾಥ ಸ್ವಾಮಿ, ಮಂಗಳೂರು ವಲಯದ ಮುಖ್ಯ ಇಂಜಿನಿಯರ್ ರವಿಕಾಂತ್ ಆರ್ ಕಾಮತ್, ಮಂಗಳೂರು ವೃತ್ತದ ಅಧೀಕ್ಷಕ ಇಂಜಿನಿಯರ್ (ವಿ) ಕೃಷ್ಣರಾಜ್.ಕೆ, ಬಂಟ್ವಾಳ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಸಂತೋಷ್ ನಾಯ್ಕ, ನೌಕರ ಸಂಘದ ಉಪಾಧ್ಯಕ್ಷ ಶಂಕರ್ ಪ್ರಕಾಶ್, ಸಾರ್ವಜನಿಕ ಸಂಪರ್ಕಾಧಿಕಾರಿ ವಸಂತ ಶೆಟ್ಟಿ, ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top