ಮಂಗಳೂರು: ಮಂಗಳೂರು ವಿಮಾನ ನಿಲ್ದಾಣ ರಸ್ತೆ ಪದವಿನಂಗಡಿ ವೆಂಕಟರಮಣ ಮಹಾಲಸಾ ದೇವಸ್ಥಾನ ಮುಂಭಾಗದ ರಸ್ತೆಗೆ 'ಶ್ರೀ ಕಾಶೀ ಮಠ ರಸ್ತೆ' ನಾಮ ಫಲಕ ವಿಧ್ಯುಕ್ತವಾಗಿ ಲೋಕಾರ್ಪಣೆ ಮಾಡುವ ಕಾರ್ಯಕ್ರಮ ಬುಧವಾರ ನಡೆಯಿತು.
ಮಂಗಳೂರು ನಗರ ಉತ್ತರದ ಶಾಸಕರಾದ ಡಾ. ವೈ ಭರತ್ ಶೆಟ್ಟಿ ಅವರು ನಾಮ ಫಲಕವನ್ನು ಉದ್ಘಾಟನೆ ಮಾಡಿದರು. ದಕ್ಷಿಣದ ಶಾಸಕರಾದ ಹಾಗೂ ವೆಂಕಟರಮಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ವೇದವ್ಯಾಸ ಕಾಮತ್ ಅವರು ಶುಭಾಶಂಸನೆ ಗೈದರು.
ವೆಂಕಟರಮಣ ಹಾಗೂ ಮಹಾಲಸಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ವಾಸುದೇವ್ ಕಾಮತ್ ಹಾಗೂ ಕಸ್ತೂರಿ ಸದಾಶಿವ ಪೈ ಹಾಗೂ ಸರ್ವ ಸದಸ್ಯರು, ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಮಂಡಲ ಅಧ್ಯಕ್ಷರಾದ ರಾಜೇಶ್ ಕೊಟ್ಟರಿ, ಮಾಜಿ ಮೇಯರ್ ಗಳಾದ ದಿವಾಕರ್, ಪ್ರೇಮಾನಂದ ಶೆಟ್ಟಿ, ಸುಧೀರ್ ಶೆಟ್ಟಿ, ಜಯಾನಂದ ಅಂಚನ್, ಮನೋಜ್ ಕುಮಾರ್, ಮಾಜಿ ಉಪ ಮೇಯರ್ ಸುಮಂಗಲ, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರುಗಳಾದ ಲೋಹಿತ್ ಅಮೀನ್, ಮನೋಹರ್ ಶೆಟ್ಟಿ, ಶರತ್, ವೀಣಾ ಮಂಗಳ, ಮಹಾ ನಗರ ಪಾಲಿಕೆ ಸದಸ್ಯರಾದ ಸಂಗೀತ ನಾಯಕ್, ಗಾಯತ್ರಿ, ಗಣೇಶೋತ್ಸವ ಸಮಿತಿ ಪದಾಧಿಕಾರಿಗಳು, ಗೆಳೆಯರ ಬಳಗ ಸರ್ವ ಸದಸ್ಯರು, ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷರು, ನವ ಚೇತನ ಫ್ರೆಂಡ್ಸ್ ಕ್ಲಬ್ ಸದಸ್ಯರು, ದೇವಸ್ಥಾನದ ಯುವಕ ವೃಂದ, ಮಹಿಳಾ ವೃಂದ ಸರ್ವ ಸದಸ್ಯರು ಉಪಸ್ಥಿತರಿದ್ದರು. ವೆಂಕಟರಮಣ ದೇವಸ್ಥಾನದ ಸಮಿತಿ ಸದಸ್ಯರಾದ ಪ್ರಶಾಂತ್ ಪೈ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಉಪಾಧ್ಯಕ್ಷರಾದ ಶ್ರೀಮತಿ ಪೂಜಾ ಪೈ ಧನ್ಯವಾದವಿತ್ತರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

