ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ

Upayuktha
0


ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಇಂದು ಸಾರ್ವಜನಿಕರ ಕುಂದು-ಕೊರತೆ ಆಲಿಸಿದರು. ಈ ವೇಳೆ ಜಿಲ್ಲೆಯ ವಿವಿಧ ಕಡೆಗಳಿಂದ ಆಗಮಿಸಿದ್ದ ಸಾರ್ವಜನಿಕರು ತಮ್ಮ ಸಮಸ್ಯೆ ಹಾಗೂ ಬೇಡಿಕೆಗಳ ಕುರಿತು ಅಹವಾಲು ಸಲ್ಲಿಸಿದ್ದಾರೆ.


ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಬೆಳ್ತಂಗಡಿ, ಸುಳ್ಯ ಮುಂತಾದ ಪ್ರದೇಶಗಳಿಂದ ಬಂದಿದ್ದ ಕೃಷಿಕರು ಎದುರಿಸುತ್ತಿರುವ ಅಡ್ಡಿ-ಆತಂಕವನ್ನು ಸಂಸದರ ಮುಂದೆ ತೋಡಿಕೊಂಡರು. ಇದಕ್ಕೆ ಸಂಸದರು ಸೂಕ್ತ ಮಾರ್ಗದರ್ಶನ ಮತ್ತು ಪರಿಹಾರ ನೀಡಿದರು.


ಇದಲ್ಲದೇ ಸಾರ್ವಜನಿಕ ಭೇಟಿ ವೇಳೆ, ರೈಲ್ವೆ ಇಲಾಖೆ, ಹೆದ್ದಾರಿ ಇಲಾಖೆ ಸೇರಿದಂತೆ ಜಿಲ್ಲೆಯಲ್ಲಿ ನಡೆಯುತ್ತಿರುವ ಹಲವಾರು ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದ ಕೆಲವು ಸಮಸ್ಯೆ-ಬೇಡಿಕೆಗಳ ಬಗ್ಗೆಯೂ ಜನರು ಸಂಸದರ ಗಮನಕ್ಕೆ ತಂದಿದ್ದಾರೆ. ಇನ್ನು ಕೆಲವೊಂದು ಸಮಸ್ಯೆಗಳನ್ನು ಆಲಿಸಿದ ಸಂಸದ ಕ್ಯಾ. ಚೌಟ ಅವರು ಸ್ಥಳದಲ್ಲೇ ಪರಿಹಾರ ಒದಗಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top