ಕಾಸರಗೋಡು: ಅಳಿಕೆ ಎರುಂಬ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಮಂಡಲ ಪೂಜಾ ಉತ್ಸವವು ಅತ್ಯಂತ ವೈಭವದಿಂದ ನಡೆಯಿತು. ಹಲವಾರು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆದ ಈ ಉತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಶ್ರೀ ದೇವರ ದರುಶನ ಪಡೆದು ಅನ್ನ ಪ್ರಸಾದ ಸ್ವೀಕರಿಸಿ ಕೃತಾರ್ಥರಾದರು. ಈ ಉತ್ಸವದ ಅಂಗವಾಗಿ ಗಡಿನಾಡ ಸಾಂಸ್ಕೃತಿಕ ಕಲಾ ವೇದಿಕೆ (ರಿ) ಕಾಸರಗೋಡು ಸಂಸ್ಥೆಯ ಸಾಂಸ್ಕೃತಿಕ ಕಲಾ ವೈಭವ ಕಲಾವಿದರ ಕಲರವ ಕಾರ್ಯಕ್ರಮ ಜರುಗಿತು.
ಗುರುರಾಜ್ ಕಾಸರಗೋಡು ಅವರ ಸಂಯೋಜನೆ ಹಾಗೂ ನಿರೂಪಣೆಯೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ ಬಾಲ ಕಲಾವಿದರು ವಿವಿಧ ಪ್ರತಿಭೆಗಳನ್ನು ಪ್ರದರ್ಶಿಸಿ ಸಹಕರಿಸಿದರು. ಕಾರ್ಯಕ್ರಮ ಅಪಾರ ಜನಸ್ತೋಮದ ಮೆಚ್ಚುಗೆಗೆ ಪಾತ್ರವಾಯಿತು. ವೇದಿಕೆಯಲ್ಲಿ ಉಪಸ್ಥಿತರಿದ್ದ ಕಾನ ಕೃಷ್ಣ ಭಟ್, ರಾಜೇಶ್ ಮತ್ತು ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಸೇರಿದಂತೆ ಗಣ್ಯರ ಸಮ್ಮುಖದಲ್ಲಿ ಸಂಸ್ಥೆಯ ಕಲಾವಿದರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ದೇವಸ್ಥಾನದ ವತಿಯಿಂದ ಸಂಸ್ಥೆಗೆ ಹಾಗೂ ಕಲಾವಿದರಿಗೆ ಶ್ರೀ ಪ್ರಸಾದ ನೀಡಿ ಹರಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


