ಉಡುಪಿ: ಶೀರೂರು ಮಠಾಧೀಶ ಶ್ರೀ ಶ್ರೀ ವೇದವರ್ಧನ ತೀರ್ಥರ ಪ್ರಥಮ ಪರ್ಯಾಯಕ್ಕೆ ಮಟ್ಟು ಭಾಗದ ಭಕ್ತರು ಮಟ್ಟುಗುಳ್ಳ ಹೊರೆಕಾಣಿಕೆ ಸಮರ್ಪಿಸಿದರು. ನಗರದ ಸಂಸ್ಕೃತ ಕಾಲೇಜಿನ ಮುಂಭಾಗದಲ್ಲಿ ಸಂಚಾಲಕ ಬೈಕಾಡಿ ಸುಪ್ರಸಾದ್ ಶೆಟ್ಟಿ ಮಟ್ಟು ಭಾಗದ ಭಕ್ತರನ್ನು ಸ್ವಾಗತಿಸಿದರು. ಬಳಿಕ ಗುಳ್ಳ ತುಂಬಿದ ಬುಟ್ಟಿಯನ್ನು ಹೊತ್ತು ಭಕ್ತರು ಸಾಲಾಗಿ ಮೆರವಣಿಗೆ ಮೂಲಕ ರಥಬೀದಿಗೆ ಬಂದು ಬಳಿಕ ಹೊರೆಕಾಣಿಕೆ ಮಂಟಪ ತಲುಪಿದರು.
ಶ್ರೀ ಕೃಷ್ಣ ಮಠ ಮತ್ತು ಮಟ್ಟುಗುಳ್ಳಕ್ಕೆ ವಿಶೇಷ ಸಂಬಂಧವಿದೆ. ವಾದಿರಾಜ ಸ್ವಾಮಿಗಳು ಅನುಗ್ರಹಿಸಿ ನೀಡಿದ ಬೀಜದಿಂದ ಹುಟ್ಟಿಕೊಂಡ ಗುಳ್ಳ ಇಂದಿ ದೇಶದಲ್ಲೇ ಜಿಐ ಪೇಟೆಂಟ್ ಪಡೆದ ಮೊದಲ ತರಕಾರಿ ಎಂಬ ಖ್ಯಾತಿ ಪಡೆದಿದೆ. ಜೊತೆಗೆ ಕೃಷ್ಣ ಮಠದ ನಿತ್ಯ ಬಳಕೆಯ ತರಕಾರಿಗಳಲ್ಲಿ ಗುಳ್ಳ ತರಕಾರಿಗೆ ವಿಶೇಷ ಸ್ಥಾನವಿದೆ. ಹೊರೆಕಾಣಿಕೆ ಸಮರ್ಪಣೆಯಲ್ಲಿ ಮಟ್ಟು ಭಾಗದ ಭಕ್ತರು, ಡಾ ಟಿ ಎಸ್ ರಾವ್ , ಪ್ರದೀಪ್ ರಾವ್, ವಿಷ್ಣು ಪಾಡೀಗಾರ್, ಸುನಿಲ್ ಬಂಗೇರ, ಸರಸ್ವತಿ ಬಂಗೇರ, ಮಟ್ಟಿ ಲಕ್ಷ್ಮೀ ನಾರಾಯಣ ರಾವ್, ಶ್ರೀ ಕಾಂತ್ ಉಪಾಧ್ಯಾಯ, ಸಂದೀಪ್ ಮಂಜ, ನರೇಶ್ ಪಾಲನ್ , ಸದಾನಂದ ಸುವರ್ಣ, ಜಯ ಪೂಜಾರಿ ಎಂ ಲಕ್ಷ್ಮಣ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


