ಉಡುಪಿ: ಸ್ವಾಮಿ ವಿವೇಕಾನಂದರು ಜಗತ್ತಿಗೆ ನೀಡಿದ ಸಂದೇಶ ನಮಗೆಲ್ಲರಿಗೂ ದಾರಿದೀಪವಾಗಿದೆ ಎಂದು ವ್ಯಕ್ತಿತ್ವ ವಿಕಸನ ತರಬೇತುದಾರ ರಾಘವೇಂದ್ರ ಪ್ರಭು ಕರ್ವಾಲು ಹೇಳಿದರು.
ಅವರು ಪರ್ಕಳ ಹೈಸ್ಕೂಲ್‌ನಲ್ಲಿ ಜೆಸಿಐ ಪರ್ಕಳ ಇದರ ವತಿಯಿಂದ ನಡೆದ ಯುವಶಕ್ತಿ ಅಭಿಯಾನ್ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಜೀವನದಲ್ಲಿ ಸ್ಪಷ್ಟವಾದ ಗುರಿ, ಧನಾತ್ಮಕ ಚಿಂತನೆ, ಸರಿಯಾದ ದಾರಿ ಮತ್ತು ದೃಢ ಸಂಕಲ್ಪ ಇದ್ದಲ್ಲಿ ಯಶಸ್ಸು ಸಾಧ್ಯ. ಯಾವುದು ಕೂಡ ಅಸಾಧ್ಯವಲ್ಲ ನಾವು ಮಾಡುವ ಪ್ರತಿಯೊಂದು ಕೆಲಸದಲ್ಲಿ ಸಂತೃಪ್ತಿ ಕಾಣಬೇಕು. ವಿದ್ಯಾರ್ಥಿಗಳು ಕೇವಲ ಪರೀಕ್ಷೆಗಾಗಿ ಓದದೆ ತಮ್ಮ ಬದುಕಿಗಾಗಿ ಓದಬೇಕಾಗಿದೆ ಎಂದರು.
ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಜೆಸಿಐ ಪರ್ಕಳ ಅಧ್ಯಕ್ಷ ಭರತ್ ಕುಲಾಲ್ ವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕ ಆನಂದ ನಾಯ್ಕ್ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.
ವೇದಿಕೆಯಲ್ಲಿ ಕಿರಿಯರ್ ಗೈಡೆನ್ಸ್ ಸಂಪನ್ಮೂಲ ಕೇಂದ್ರದ ದೀಕ್ಷಿತ್, ವಲಯ ನಿರ್ದೇಶಕ ಸ್ವರಾಜ್ ಶೆಟ್ಟಿ, ಕಾರ್ಯದರ್ಶಿ ನಿತೀಶ್ ನಾಯ್ಕ್, ಧನುಶ್, ಪೂರ್ವ ವಲಯ ಅಧಿಕಾರಿ ಮರಿಯಪ್ಪ ಮುಂತಾದವರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


