ಜ.26: ಪರ್ಕಳದಲ್ಲಿ ಬೃಹತ್ ಉಚಿತ ನೇತ್ರ ತಪಾಸಣಾ ಶಿಬಿರ

Upayuktha
0


ಪರ್ಕಳ: ಜೆಸಿಐ ಪರ್ಕಳ, ಶ್ರೀ ವಿಘ್ನೇಶ್ವರ ಸಭಾಭವನ ಪರ್ಕಳ, ಮಂಗಳ ಕಲಾ ಸಾಹಿತ್ಯ ವೇದಿಕೆ ಪರ್ಕಳ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಉಡುಪಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಹಿರೇಬೆಟ್ಟು ಇವರ ಸಂಯುಕ್ತ ಆಶ್ರಯದಲ್ಲಿ ಬೃಹತ್ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಜನವರಿ 26 ರಂದು ಸೋಮವಾರ ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1.00 ಗಂಟೆಯವರೆಗೆ ಪರ್ಕಳದ ಶ್ರೀ ವಿಘ್ನೇಶ್ವರ ಸಭಾಭವನದಲ್ಲಿ ಆಯೋಜಿಸಲಾಗಿದೆ.


ಶಿಬಿರದಲ್ಲಿ ಸಾಮಾನ್ಯ ಕಣ್ಣಿನ ತಪಾಸಣೆಯೊಂದಿಗೆ ಡಯಾಬೆಟಿಕ್ ರೆಟಿನೋಪತಿ ಹಾಗೂ ಗ್ಲೂಕೋಮಾ ತಪಾಸಣೆಗಳನ್ನು ನಡೆಸಲಾಗುವುದು. ಅಗತ್ಯವಿರುವವರಿಗೆ ರಿಯಾಯಿತಿ ದರದಲ್ಲಿ ಕನ್ನಡಕಗಳನ್ನು ವಿತರಿಸಲಾಗುವುದು. ಜೊತೆಗೆ ಕಣ್ಣಿನ ಪೊರೆ ಸಮಸ್ಯೆ ಹೊಂದಿರುವವರಿಗೆ ಶಸ್ತ್ರಚಿಕಿತ್ಸೆಯನ್ನು ಸಂಪೂರ್ಣ ಉಚಿತವಾಗಿ ಮಾಡಲಾಗುವುದು.


ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಆಯ್ಕೆಯಾದವರಿಗೆ ನಿಗದಿತ ದಿನಾಂಕದಂದು ಉಡುಪಿಯ ಪ್ರಸಾದ್ ನೇತ್ರಾಲಯದಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಶಸ್ತ್ರಚಿಕಿತ್ಸೆಯ ಮರುದಿನವೇ ಅವರನ್ನು ವಾಪಸ್ ಕಳುಹಿಸಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.


ಈ ಶಿಬಿರದ ಸದುಪಯೋಗವನ್ನು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಡೆದುಕೊಳ್ಳಬೇಕೆಂದು ಆಯೋಜಕರು ಮನವಿ ಮಾಡಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top