ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯ, ಮಾನಸ ಟ್ರಸ್ಟ್ (ರಿ), ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜು ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸಂಯುಕ್ತ ಆಶ್ರಯದಲ್ಲಿ 2025-26 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರಕ್ಕೆ ಮುಂಡಘಟ್ಟದಲ್ಲಿ ಚಾಲನೆ ನೀಡಲಾಯಿತು. "ಯುವಶಕ್ತಿಯಿಂದ ಡಿಜಿಟಲ್ ಸಾಕ್ಷರತೆ" ಎಂಬ ಆಶಯದೊಂದಿಗೆ ಹಮ್ಮಿಕೊಂಡಿರುವ ಈ ಶಿಬಿರವು ಗ್ರಾಮದ ಸಾಂಸ್ಕೃತಿಕ ಕೇಂದ್ರದಲ್ಲಿ ಉದ್ಘಾಟನೆಗೊಂಡಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪಾಟೀಲ್ ರೈಸ್ ಮಿಲ್ ಮಾಲೀಕರಾದ ನಂಜಪ್ಪ ಗೌಡ್ರು, "ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಸಹಬಾಳ್ವೆಯನ್ನು ಕಲಿಸುವುದೇ ಎನ್ ಎಸ್ ಎಸ್ ನ ಮುಖ್ಯ ಉದ್ದೇಶ. ಸ್ವಯಂಸೇವಕರು ಶಿಬಿರದ ಅವಧಿಯಲ್ಲಿ ಈ ಮೌಲ್ಯಗಳನ್ನು ಮನನ ಮಾಡಿಕೊಂಡು, ಜೀವನದ ಅತ್ಯಮೂಲ್ಯ ಅನುಭವಗಳನ್ನು ಪಡೆದುಕೊಳ್ಳಬೇಕು" ಎಂದು ಕರೆ ನೀಡಿದರು.
ಮುಂಡಘಟ್ಟದ ಮುಖಂಡರಾದ ಸುರೇಶ್ ಸಿಂಗನಳ್ಳಿ ಮಾತನಾಡಿ, "ನಮ್ಮ ಹಳ್ಳಿಯಲ್ಲಿ ನಡೆಯುತ್ತಿರುವ ಈ ಶಿಬಿರಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ವಿದ್ಯಾರ್ಥಿಗಳಿಗೆ ಶಿಬಿರದ ಅವಧಿಯಲ್ಲಿ ಯಾವುದೇ ಸಹಾಯ ಬೇಕಾದಲ್ಲಿ ಗ್ರಾಮಸ್ಥರು ಸದಾ ಸಿದ್ಧರಿದ್ದೇವೆ" ಎಂದು ಆಶ್ವಾಸನೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಅಪರ ಪ್ರಾಂಶುಪಾಲರಾದ ಡಾ. ಅರ್ಚನಾ. ಕೆ.ಭಟ್ ರವರು ತಮ್ಮ ವೈಯಕ್ತಿಕ ಅನುಭವಗಳನ್ನು ಹಂಚಿಕೊಳ್ಳುತ್ತಾ "ನಾನು ಸತತವಾಗಿ 15 ಎನ್ ಎಸ್ ಎಸ್ ಶಿಬಿರಗಳಲ್ಲಿ ಭಾಗವಹಿಸಿದ್ದೇನೆ. ಇಂದು ನಾನು ಜೀವನದಲ್ಲಿ ಏನಾದರೂ ಸಾಧಿಸಿದ್ದರೆ ಮತ್ತು ಸ್ವತಂತ್ರವಾಗಿ ನಿಲ್ಲಲು ಶಕ್ತಳಾಗಿದ್ದರೆ ಅದಕ್ಕೆ ಎನ್ ಎಸ್ ಎಸ್ ನೀಡಿದ ತರಬೇತಿಯೇ ಬೆನ್ನೆಲುಬು. ಇದು ಕೇವಲ ನನಗಷ್ಟೇ ಅಲ್ಲ, ನೀವು ಕೂಡ ಇದನ್ನು ಸರಿಯಾಗಿ ಬಳಸಿಕೊಂಡರೆ ಜೀವನದ ಉತ್ತುಂಗಕ್ಕೇರಲು ಸಾಧ್ಯ" ಎಂದು ಸ್ವಯಂಸೇವಕರಿಗೆ ಸ್ಫೂರ್ತಿ ತುಂಬಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಹೇಮಾವತಿ ಬೋರಪ್ಪ, ನಿವೃತ್ತ ಸಹಕಾರಿ ಬ್ಯಾಂಕ್ ಇನ್ಸ್ಪೆಕ್ಟರ್ ಧರ್ಮಪ್ಪ, ಬಸವೇಶ್ವರ ಸ್ವಾಮಿ ದೇವಸ್ಥಾನದ ಸದಸ್ಯರಾದ ರಾಜಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಶಿಬಿರದ ಯಶಸ್ಸಿಗಾಗಿ ಎನ್ ಎಸ್ ಎಸ್ ಘಟಕ-1ರ ಕಾರ್ಯಕ್ರಮಾಧಿಕಾರಿ ಡಾ. ಸುಕೀರ್ತಿ ಮತ್ತು ಘಟಕ-2 ರ ಕಾರ್ಯಕ್ರಮಾಧಿಕಾರಿ ಮೋಹನ್ ಕುಮಾರ್ ಅವರು ಮಾರ್ಗದರ್ಶನ ನೀಡುತ್ತಿದ್ದಾರೆ. ಈ ಸಂದರ್ಭದಲ್ಲಿ ಮಂಡಘಟ್ಟದ ಗ್ರಾಮಸ್ಥರು, ಕಾಲೇಜಿನ ಉಪನ್ಯಾಸಕ ವೃಂದ ಹಾಗೂ ನೂರಾರು ಸ್ವಯಂಸೇವಕರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


