ರಾಜ್ಯ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಎನ್‌ಎಸ್‌ಎಸ್ ಸ್ವಯಂಸೇವಕ ಆಯ್ಕೆ

Upayuktha
0


ಶಿವಮೊಗ್ಗ: ಜನವರಿ 26ರಂದು ಬೆಂಗಳೂರಿನ ಮಾಣಿಕ್‌ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ನಡೆಯಲಿರುವ 77ನೇ ಗಣರಾಜ್ಯೋತ್ಸವದ ಪಥಸಂಚಲನ ಕಾರ್ಯಕ್ರಮದಲ್ಲಿ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ದ್ವಿತೀಯ ಬಿ.ಎ. ವಿದ್ಯಾರ್ಥಿ ಶ್ರೇಯಾಂಕ್ ಎಸ್. ಬಂಡಿ ಅವರು ಭಾಗವಹಿಸಲಿದ್ದಾರೆ.


ರಾಷ್ಟ್ರೀಯ ಸೇವಾ ಯೋಜನೆಯ (ಎನ್‌ಎಸ್‌ಎಸ್) ಸ್ವಯಂಸೇವಕರಾಗಿರುವ ಶ್ರೇಯಾಂಕ್ ಎಸ್. ಬಂಡಿ ಅವರು, ರಾಜ್ಯ ಮಟ್ಟದ ರಾಷ್ಟ್ರೀಯ ಸೇವಾ ಯೋಜನೆಯ ತುಕಡಿಯಲ್ಲಿ ಭಾಗವಹಿಸಲು ಅಗತ್ಯ ಅರ್ಹತೆಯನ್ನು ಪಡೆದಿದ್ದಾರೆ. ರಾಜ್ಯದ ವಿವಿಧ ಕಾಲೇಜುಗಳಿಂದ ಆಯ್ಕೆಯಾದ ಎನ್‌ಎಸ್‌ಎಸ್ ಸ್ವಯಂಸೇವಕರೊಂದಿಗೆ ಅವರು ಗೌರವಪೂರ್ಣ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಪಾಲ್ಗೊಳ್ಳಲಿದ್ದಾರೆ.


ಈ ಸಾಧನೆಗಾಗಿ ವಿದ್ಯಾರ್ಥಿಯನ್ನು ಕಾಲೇಜಿನ ಪ್ರಾಂಶುಪಾಲರು, ಆಡಳಿತ ಮಂಡಳಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿ ಶುಭ ಹಾರೈಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top