ಬಂಟ್ವಾಳ: ಸರಪಾಡಿ ಅರಮನೆಯ ನರಸಿಂಹ ಐತಾಳ್ (86) ಅವರು ಜ. 17ರಂದು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ ಹಾಗೂ ಬಂಧು ವರ್ಗವನ್ನು ಅಗಲಿದ್ದಾರೆ. ಅವರು ಮಾವಿನಕಟ್ಟೆ ಸರಕಾರಿ ಶಾಲೆಯಲ್ಲಿ ಸುದೀರ್ಘ ವರ್ಷಗಳ ಕಾಲ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದರು.
ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಜೀರ್ಣೊದ್ಧಾರ ಸಮಿತಿ, ಜಾತ್ರೋತ್ಸವ ಸಮಿತಿಯ ಗೌರವ ಸಲಹೆಗಾರರಾಗಿ, ಬ್ರಹ್ಮಕಲಶ ಸಮಿತಿಯ ಉಪಾಧ್ಯಕ್ಷರಾಗಿ ಪ್ರತಿ ಕಾರ್ಯಗಳಲ್ಲೂ ಸಕ್ರಿಯವಾಗಿ ತೊಡಗಿಕೊಂಡಿದ್ದರು. ಜತೆಗೆ ಶ್ರೀ ವೆಂಕಟರಮಣ ದೇವಸ್ಥಾನ ಸೇರಿದಂತೆ ಗ್ರಾಮದ ಪ್ರತಿ ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಂಡು ವಿಶೇಷ ಸಹಕಾರ ನೀಡುತ್ತಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


