ರಾಷ್ಟ್ರೀಯ ಮತದಾರರ ದಿನಾಚರಣೆ

Upayuktha
0

 



ಪುತ್ತೂರು: ಸಂತ ಫಿಲೋಮಿನ ಕಾಲೇಜು ಸ್ವಾಯತ್ತ ಪುತ್ತೂರಿನಲ್ಲಿ ಜ. 23 ರಂದು ಚುನಾವಣಾ ಸಾಕ್ಷರತಾ ಸಂಘ ಮತ್ತು ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಿಸಲಾಯಿತು.


ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕಾಲೇಜಿನ ಉಪ ಪ್ರಾಂಶುಪಾಲ ಡಾ| ವಿಜಯಕುಮಾರ್ ಎಂ ರಾಷ್ಟ್ರೀಯ ಮತದಾರರ ದಿನಾಚರಣೆ ಮಹತ್ವವನ್ನು ವಿವರಿಸುತ್ತಾ ಪ್ರತಿಯೊಬ್ಬ ನಾಗರಿಕನು ತನ್ನ ಹಕ್ಕನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಲು ಕರೆ ನೀಡಿದರು.


ಕಾಲೇಜಿನ ಪ್ರಾಂಶುಪಾಲರಾದ ಡಾ| ಆ್ಯಂಟೋನಿ ಪ್ರಕಾಶ್ ಮೊಂತೇರೊರವರು ರಾಷ್ಟ್ರೀಯ ಮತದಾರರ ದಿನಾಚರಣೆಯ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿ ವೃಂದದವರು ಭಾಗವಹಿಸಿದ್ದರು.


Post a Comment

0 Comments
Post a Comment (0)
To Top