ಉಜಿರೆ: ಎಸ್‌ಡಿಎಂ ಪದವಿ ಪೂರ್ವ ಕಾಲೇಜಿನಲ್ಲಿ ಯುವ ದಿನಾಚರಣೆ

Upayuktha
0


ಉಜಿರೆ: ಶ್ರೀ ಧರ್ಮಸ್ಥಳ ಮಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಸ್ವಾಮಿ ವಿವೇಕಾನಂದರ ಜಯಂತಿ ಪ್ರಯುಕ್ತ ಯುವ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಮಾತನಾಡಿ "ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ ಎಂದು ಹೇಳಿರುವ ವಿವೇಕಾನಂದರು ಯುವ ಜನತೆ ತಮ್ಮ ಜೀವನಕ್ಕೆ ಸ್ಪಷ್ಟ ಗುರಿಯನ್ನು ಹೊಂದಿ ಶಿಸ್ತುಬದ್ಧವಾಗಿ ಬದುಕಬೇಕು ಎಂಬ  ಸಂದೇಶ ಕೊಟ್ಟವರು. ಆದುದರಿಂದ ಯುವ ಜನತೆಗೆ ವಿವೇಕಾನಂದರು ಸ್ಫೂರ್ತಿಯಾಗಿದ್ದಾರೆ" ಎಂದು ಹೇಳಿದರು.


ಉಪ ಪ್ರಾಂಶುಪಾಲರಾದ ರಾಜೇಶ್ ಬಿ, ಎನ್ ಎಸ್ ಎಸ್ ಯೋಜನಾಧಿಕಾರಿ ವಿಶ್ವನಾಥ್ ಎಸ್, ಸಹ ಯೋಜನಾಧಿಕಾರಿ ಶೋಭಾ ಪಿ, ಕಾಲೇಜಿನ ಎಲ್ಲಾ ಉಪನ್ಯಾಸಕ ವರ್ಗ, ಎನ್ ಎಸ್ ಎಸ್ ಸ್ವಯಂ ಸೇವಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸ್ವಯಂ ಸೇವಕ ಕಾರ್ತಿಕ್ ಸ್ವಾಗತಿಸಿ ವಂದಿಸಿದರು.



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top