ಮಂಗಳೂರಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ
ಮಂಗಳೂರು: ಸುಶಿಕ್ಷಿತ ಮತ್ತು ಸುಸಂಸ್ಕೃತ ಯುವ ಜನರೇ ನಮ್ಮ ದೇಶದ ಬಹುದೊಡ್ಡ ಆಸ್ತಿ ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದರು. ಅವರು ಪುರಭವನದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಅಂಗವಾಗಿ ಯುವನಿಕ, ಮಂಗಳೂರು ವಿವಿ ಎನ್ ಎಸ್ ಎಸ್ , ಮತ್ತು ಹೆಲ್ತ್ ವಾಲಂಟೀರ್ಸ್ ಸಹಯೋಗದಲ್ಲಿ ಜಂಟಿಯಾಗಿ ರಾಷ್ಟ್ರೀಯ ಯುವ ದಿನಾಚರಣೆಯನ್ನು ಆಯೋಜಿಸಿದ್ದರು. ಸೇಂಟ್ ಜೋಸೆಫ್ ಎಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯ ನಿರ್ದೇಶಕ ಫಾ. ವಿಲ್ಫ್ರೆಡ್ ಪ್ರಕಾಶ್ ಡಿಸೋಜ,ಮಂಗಳೂರು ವಿಶ್ವವಿದ್ಯಾಲಯ ಉಪಕುಲಪತಿಗಳು ಪ್ರೊ. ಪಿ. ಎಲ್. ಧರ್ಮ ಮುಖ್ಯ ಅತಿಥಿಗಳಾಗಿ ಭಾಗನಹಿಸಿದ್ದರು.
ಕರ್ನಾಟಕ ರಾಜ್ಯ ಗಾಣಿಗ ಅಭಿವೃದ್ಧಿ ಮಂಡಳಿ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್, ಮಂಗಳೂರು ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ರಘುರಾಜ್ ಕದ್ರಿ,ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ,ಅಧ್ಯಕ್ಷೆ ಶಾಲೆಟ್ ಪಿಂಟೊ, ರಾಜ್ಯ ಬೀಜ ಮತ್ತು ಸಾವಯವ ದೃಢೀಕರಣ ಸಂಸ್ಥೆಯ ಅಧ್ಯಕ್ಷೆ ಲಾವಣ್ಯ ಬಳ್ಳಾಲ್ ಜೈನ್ ಎನ್ಎಸ್ಎಸ್, ಕಾರ್ಯಕ್ರಮ ಸಂಯೋಜಕ, ಡಾ. ಶೇಷಪ್ಪ ಅಮೀನ್, ಹಿರಿಯ ವಕೀಲ ದಿನಕರ ಶೆಟ್ಟಿ, ಶ್ರೀನಿವಾಸ್ ವಿಶ್ವವಿದ್ಯಾಲಯ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಅಂಡ್ ಕಾಮರ್ಸ್, ಇನ್ಸ್ಟಿಟ್ಯೂಟ್ ಆಫ್ ಪೋರ್ಟ್ ಶಿಪ್ಪಿಂಗ್ ಮತ್ತು ಲಾಜಿಸ್ಟಿಕ್ಸ್ ಮ್ಯಾನೇಜ್ಮೆಂಟ್ ಡೀನ್ ಡಾ. ವೆಂಕಟೇಶ್ ಅಮೀನ್, ಕರಾವಳಿ ಸಂಸ್ಥೆ ಉಡುಪಿ ಪ್ರಾಂಶುಪಾಲರು ಎಂ. ಜೈಕಿಶನ್ ಭಟ್ ಉಪಸ್ಥಿತರಿದ್ದರು.
ಯುವನಿಕ ಸಂಯೋಜಕ ರಘುವೀರ್ ಸೂಟರಪೇಟೆ ಪ್ರಾಸ್ತಾವಿಕ ಮಾತುಗಳನ್ನು ಆಡಿದರು. ವೈಶಾಲಿ ಮತ್ತು ನಿಹಾಲ್ ಕಾರ್ಯ ಕ್ರಮ ನಿರ್ವಹಿಸಿದರು. ಯುವನಿಕ ನಿರ್ದೇಶಕ ಕೆ.ಕಸ್ತೂರಿ, ಸ್ವಯಂ ಸೇವಕರಾದ ಹಿತೇಶ್, ಸುಹಾನಿ, ಪವನ್, ಸತೋಷ ಯಾದವ್, ಸಂಜನಾ, ದೀಕ್ಷಿತ್ ನಾಯಕ್ ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


