ಉಡುಪಿ: ಜನವರಿ 17 ಮತ್ತು 18 ರಂದು ನಡೆಯಲಿರುವ ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಅಂಗವಾಗಿ ಜ. 9 ರಂದು ಪರ್ಯಾಯ ಪುರಪ್ರವೇಶ ಮೆರವಣಿಗೆ ಹಿನ್ನೆಲೆ, ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಪರ್ಯಾಯ ಪುರಪ್ರವೇಶ ಮೆರವಣಿಗೆ ಹಿನ್ನೆಲೆಯಲ್ಲಿ ಉಡುಪಿ ನಗರ ವ್ಯಾಪ್ತಿಯಲ್ಲಿ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988ರ ನಿಯಮ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಾಮವಳಿಗಳು 1989ರ ನಿಯಮ 221(ಎ)(2) & (5) ರ ಆನ್ವಯ, ಜ. 9 ರಂದು ಮದ್ಯಾಹ್ನ 1.00 ಗಂಟೆಯಿಂದ ಸಂಜೆ 07.00 ಗಂಟೆಯವರೆಗೆ ಈ ಕೆಳಕಂಡಂತೆ ವಾಹನಗಳ ಸಂಚಾರ ನಿಷೇಧ ಮಾಡಿ ಮತ್ತು ಬದಲಿ ಮಾರ್ಗದಲ್ಲಿ ಸಂಚರಿಸಲು ಅವಕಾಶ ಕಲ್ಪಿಸಿ ಜಿಲ್ಲಾ ದಂಡಧಿಕಾರಿಯು ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಆದೇಶಿಸಿರುತ್ತಾರೆ.
ಮಣಿಪಾಲದಿಂದ ಉಡುಪಿ ನಗರಕ್ಕೆ ಹೋಗುವಂತಹ ವಾಹನಗಳು ಎಂ.ಜಿ.ಎಂ ಎದುರಿನ ಸುನಾಗ್ ಆಸ್ಪತ್ರೆ ಬಳಿ ಎಡ ತಿರುವು ಪಡೆದು ಸುದೀಂದ್ರ ಕಲ್ಯಾಣ ಮಂಟಪ ಮಾರ್ಗವಾಗಿ ಎಸ್.ಕೆ.ಎಂ ಬಳಿ ಎಡ ತಿರುವು ಪಡೆದು ಬೀಡಿನಗುಡ್ಡೆ-ಚಿಟ್ಟಾಡಿ-ಅಮ್ಮಣ್ಣಿ ರಾಮಣ್ಣ ಹಾಲ್ ಮುಂದಿನ ರಸ್ತೆಯಿಂದ ಮಿಷನ್ ಕಂಪೌಂಡ್ -ಜೋಡುಕಟ್ಟೆ ತಲುಪಿ ಉಡುಪಿ ನಗರಕ್ಕೆ ತೆರಳುವುದು.
ಶಿರಬೀಡು ಜಂಕ್ಷನ್ ನಿಂದ ಕಿದಿಯೂರು ಹೋಟೆಲ್ ಮೂಲಕ ಸರ್ವೀಸ್ ಬಸ್ ನಿಲ್ದಾಣದ ವರೆಗಿನ ಏಕಮುಖ ಸಂಚಾರ ವ್ಯವಸ್ಥೆಯ ರಸ್ತೆಯಲ್ಲಿ ಮೆರವಣಿಗೆ ಪ್ರವೇಶಿಸುವ ಸಮಯದಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಮಂಗಳೂರು ಕಡೆಯಿಂದ ಉಡುಪಿ ನಗರಕ್ಕೆ ಪ್ರವೇಶಿಸುವ ಎಲ್ಲಾ ವಾಹನಗಳು ಓಲ್ಡ್ ಡಯಾನ ಸರ್ಕಲ್‌ನಿಂದ ಮಿತ್ರ ಪ್ರಿಯಾ ಜಂಕ್ಷನ್ ಮೂಲಕ ಚಿತ್ತರಂಜನ್ ಸರ್ಕಲ್ ಸಂಸ್ಕೃತ ಕಾಲೇಜ್ ಜಂಕ್ಷನ್ ಜಾಮೀಯಾ ಮಸೀದಿ ಜಂಕ್ಷನ್‌ನಿಂದ ಎಡತಿರುವು ಪಡೆದು ಸರ್ವೀಸ್ ಬಸ್ ನಿಲ್ದಾಣ ತಲುಪುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

