ಮಂಗಳೂರು: ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿ ಡಾ. ಎನ್.ವಿನಯ ಹೆಗ್ಡೆ ಇಂದು ಗುರುವಾರ ಬೆಳಗಿನ ಜಾವ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು.
ರಾಜ್ಯದ ಪ್ರಮುಖ ಶಿಕ್ಷಣ ತಜ್ಞರು, ಉದ್ಯಮಿ ಮತ್ತು ಸಮಾಜ ಸೇವಕರಾಗಿ ಅವರು ಗುರುತಿಸಿಕೊಂಡಿದ್ದಾರೆ. ವಿನಯ ಹೆಗ್ಡೆ ಅವರು ಲೋಕಸಭಾ ಸ್ಪೀಕರ್ ಆಗಿದ್ದ ದಿವಂಗತ ಜಸ್ಟಿಸ್ ಕೆ.ಎಸ್. ಹೆಗ್ಡೆ ಅವರ ಪುತ್ರ.
ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ತಮ್ಮ ಶಿಕ್ಷಣ ಪೂರೈಸಿದವರು. 1979ರಲ್ಲಿ 'ನಿಟ್ಟೆ ಎಜುಕೇಶನ್ ಟ್ರಸ್ಟ್' ಸ್ಥಾಪಿಸಿದರು. ಇಂದು ನಿಟ್ಟೆ ಶಿಕ್ಷಣ ಸಂಸ್ಥೆಗಳು ಮಂಗಳೂರು, ಬೆಂಗಳೂರು ಮತ್ತು ನಿಟ್ಟೆಯಲ್ಲಿ 40ಕ್ಕೂ ಹೆಚ್ಚು ವಿದ್ಯಾಸಂಸ್ಥೆಗಳನ್ನು ಹೊಂದಿವೆ. ಇದರಲ್ಲಿ ವೈದ್ಯಕೀಯ, ಎಂಜಿನಿಯರಿಂಗ್, ದಂತವೈದ್ಯಕೀಯ, ಫಾರ್ಮಸಿ ಮತ್ತು ಮ್ಯಾನೇಜ್‌ಮೆಂಟ್ ಕಾಲೇಜುಗಳು ಸೇರಿವೆ.
ಪ್ರಸ್ತುತ ಅವರು ಮಂಗಳೂರಿನ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿಯಾಗಿದ್ದರು. ಲೆಮಿನಾ ಸಸ್ಪೆನ್ಷನ್ ಪ್ರೈವೇಟ್ ಲಿಮಿಟೆಡ್ ಸೇರಿದಂತೆ ಲೆಮಿನಾ ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರಾಗಿದ್ದಾರೆ. ಇದು ಆಟೋಮೊಬೈಲ್ ಬಿಡಿಭಾಗಗಳ ತಯಾರಿಕೆಯಲ್ಲಿ ಪ್ರಮುಖ ಸಂಸ್ಥೆಯಾಗಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


