ಮಕ್ಕಳು ಮತ್ತು ಹೆತ್ತವರು ಪರಸ್ಪರ ಗೌರವ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳಬೇಕು: ಅನಂತ ಪದ್ಮನಾಭ ಕೂಡ್ಳು
ಮುಜುಂಗಾವು: ಶ್ರೀ ಭಾರತಿ ವಿದ್ಯಾಪೀಠದಲ್ಲಿ ರಕ್ಷಕ ದಿನಾಚರಣೆ (Parents Day) ಯನ್ನು ಆಚರಿಸಲಾಯಿತು. ಅತಿಥಿಗಳಾಗಿ ಅನಂತಪದ್ಮನಾಭ ಕೂಡ್ಳು, ಜಿಲ್ಲಾ ಕುಟುಂಬ ಪ್ರಬೋಧನ್ ಸಂಯೋಜಕರು, ಕಾಸರಗೋಡು ಜಿಲ್ಲೆ ಇವರು ಆಗಮಿಸಿ, ಮಕ್ಕಳು ಹಾಗೂ ಹೆತ್ತವರ ನಡುವಿನ ಭಾಂದವ್ಯದ ಕುರಿತು ವಿವರಿಸಿದರು.
ಹೆತ್ತವರು ಬಹುಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಚಂದಗಾಣಿಸಿದರು. ಈ ಸಂದರ್ಭದಲ್ಲಿ ಹೆತ್ತವರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಹಾಗೂ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿದ್ದು ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು. ಮಧ್ಯಾಹ್ನದ ಭೋಜನದ ವ್ಯವಸ್ಥೆಯನ್ನು ಕೂಡ ಹೆತ್ತವರೇ ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ಬೆಜಪ್ಪೆ, ರಕ್ಷಕ- ಶಿಕ್ಷಕ ಸಂಘದ ಅಧ್ಯಕ್ಷ ಉದಯಕುಮಾರ್ ಮಾಯಿಪ್ಪಾಡಿ, ಶಾಲಾ ಆಡಳಿತ ಸಮಿತಿಯ ಕಾರ್ಯದರ್ಶಿ ಎಚ್ ಎಸ್ ಪ್ರಸಾದ್, ಜೊತೆ ಕಾರ್ಯದರ್ಶಿ ಬಾಲಕೃಷ್ಣ ಶರ್ಮ ಅನಂತಪುರ, ಮಾತೃ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ದೀಪಶ್ರೀ ದೊಡ್ಡಮಾಣಿ, ಹಾಗೂ ಮುಖ್ಯ ಶಿಕ್ಷಕರಾದ ಶ್ಯಾಮ್ ಭಟ್ ದರ್ಬೆಮಾರ್ಗ, ಸಹ ಮುಖ್ಯ ಶಿಕ್ಷಕಿ ಶ್ರೀಮತಿ ಚಿತ್ರ ಸರಸ್ವತಿ ಹಾಗೂ ಅಧ್ಯಾಪಕ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶ್ರೀಮತಿ ದೀಪಶ್ರೀ ದೊಡ್ಡಮಾಣಿ ಹಾಗೂ ಶ್ರೀಮತಿ ಶರ್ಮಿಳ ಅವರು ನಡೆಸಿಕೊಟ್ಟರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

