ಎನ್. ವಿನಯ್ ಹೆಗ್ಡೆ ನಿಧನಕ್ಕೆ ಪರ್ಯಾಯ ಶ್ರೀಪಾದರ ಸಂತಾಪ

Upayuktha
0


ಉಡುಪಿ: ಕರಾವಳಿ ಕರ್ನಾಟಕದ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಕ್ರಾಂತಿಯನ್ನುಂಟುಮಾಡಿದ ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಮತ್ತು ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಾಧಿಪತಿ ಎನ್. ವಿನಯ್ ಹೆಗ್ಡೆ ಅವರ ನಿಧನದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು ಎಂದು ಪರ್ಯಾಯ ಶ್ರೀಪಾದರು ಸಂತಾಪ ವ್ಯಕ್ತಪಡಿಸಿದ್ದಾರೆ.


ದೂರದರ್ಶಿತ್ವದ ಉದಾತ್ತ ಚಿಂತನೆಯೊಂದಿಗೆ ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಬೆಳೆಸಿದ ಅವರು, ರಾಜ್ಯಾದ್ಯಂತ 44ಕ್ಕೂ ಅಧಿಕ ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸುವ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಅಮೂಲ್ಯ ಕೊಡುಗೆ ನೀಡಿದ್ದಾರೆ. ದೇರಳಕಟ್ಟೆಯಲ್ಲಿ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯನ್ನು ಆರಂಭಿಸಿ, ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ವೈದ್ಯಕೀಯ ಸೇವೆಗಳನ್ನು ಒದಗಿಸುವ ಮೂಲಕ ಆರೋಗ್ಯ ಕ್ಷೇತ್ರದಲ್ಲಿಯೂ ಮಹತ್ವದ ಸೇವೆ ಸಲ್ಲಿಸಿದ್ದಾರೆ.


ಇದಲ್ಲದೆ, ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿಯೂ ದಾನಿಗಳಾಗಿ ಸಕ್ರಿಯವಾಗಿ ತೊಡಗಿಸಿಕೊಂಡು ಸಮಾಜದಲ್ಲಿ ವಿಶಿಷ್ಟ ಗುರುತನ್ನು ಪಡೆದಿದ್ದರು. ಅವರ ನಿಧನವು ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಪರ್ಯಾಯ ಶ್ರೀಪಾದರು ಹೇಳಿದ್ದಾರೆ.


ಅಗಲಿದ ಮಹಾತ್ಮರ ದಿವ್ಯಾತ್ಮಕ್ಕೆ ಭಗವಂತನು ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬ ವರ್ಗಕ್ಕೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ದಯಪಾಲಿಸಲಿ ಎಂದು ಪರ್ಯಾಯ ಶ್ರೀಪಾದರು ಶ್ರೀ ಕೃಷ್ಣ ಮುಖ್ಯಪ್ರಾಣರಲ್ಲಿ ಪ್ರಾರ್ಥಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top