ನಿಟ್ಟೆಯ ಸರಿತಾ ಶೆಟ್ಟಿಯವರಿಗೆ ಪಿ.ಹೆಚ್.ಡಿ.

Upayuktha
0


ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎಂಸಿಎ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಸರಿತಾ ಶೆಟ್ಟಿ ಅವರು 'ಡೆವಲಪ್ಮೆಂಟ್ ಆಫ್ ನ್ಯಾಚುರಲ್ ಲ್ಯಾಂಗ್ವೇಜ್ ಡಯಲಾಗ್ ಸಿಸ್ಟಮ್ ಫಾರ್ ಕನ್ನಡ ಲ್ಯಾಂಗ್ವೇಜ್ ಇನ್ ಹೆಲ್ತ್ ಕೇರ್  ಡೊಮೈನ್' ಎಂಬ ವಿಷಯದ ಬಗೆಗೆ ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ಘೋಷಿಸಿದೆ. ಅವರು ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕಿ ಡಾ. ಸಾರಿಕಾ ಹೆಗ್ಡೆ ಅವರ ಮಾರ್ಗದರ್ಶನದಲ್ಲಿ ಸಂಶೋಧನಾ ಕಾರ್ಯವನ್ನು ಕೈಗೊಂಡಿದ್ದರು.


ಇವರು ನಿಟ್ಟೆಯ ಚಂದ್ರಹಾಸ ಶೆಟ್ಟಿ ಹಾಗೂ ಕುಮುದಾ ಚಂದ್ರಹಾಸ್ ಶೆಟ್ಟಿ ದಂಪತಿಯ ಅವಳಿ ಪುತ್ರಿಯರಲ್ಲಿ ಒಬ್ಬರಾಗಿರುತ್ತಾರೆ. ಇವರ ಶಿಕ್ಷಣದ ಸಂಪೂರ್ಣ ವೆಚ್ಚವನ್ನು ನಿಟ್ಟೆ ವಿಶ್ವವಿದ್ಯಾಲಯದ ಕುಲಾಧಿಪತಿಗಳಾಗಿದ್ದ ಶ್ರೀಯುತ ಎನ್. ವಿನಯ  ಹೆಗ್ಡೆಯವರು ಭರಿಸಿರುತ್ತಾರೆ. ಇವರು ಮಂಗಳೂರಿನ ಎಂ.ಆರ್.ಪಿ.ಎಲ್. ಉದ್ಯೋಗಿ ಪ್ರಸನ್ನಕುಮಾರ್ ಶೆಟ್ಟಿಯವರ ಧರ್ಮಪತ್ನಿ.



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top