ರಾಜ್ಯದಲ್ಲೇ ಮೊದಲ ಬಾರಿಗೆ 1500 ವಿದ್ಯಾರ್ಥಿಗಳಿಂದ ಘೋಷ ಪಥಸಂಚಲನ
ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರುಇಲ್ಲಿನ ಸಮೂಹ ಸಂಸ್ಥೆಗಳು ಪ್ರತಿವರ್ಷ ನಿರಂತರವಾಗಿರಾಷ್ಟ್ರ ಸಂತ ವಿವೇಕಾನಂದರ ಜಯಂತಿಯನ್ನು ಸಂಭ್ರಮದಿಂದ ಆಚರಿಸಿಕೊಂಡು ಬರುತ್ತಿದೆ.ಈ ಭಾರಿ ವಿವೇಕಾನಂದ ಜಯಂತಿಯ ಅಂಗವಾಗಿ ಶತಜಯಘೋಷ ಪರಿಕಲ್ಪನೆಯಲ್ಲಿಘೋಷ ಪಥಸಂಚಲನ ಕಾರ್ಯಕ್ರಮ ನಡೆಯಿತು.
ವಿವೇಕಾನಂದ ವಿದ್ಯಾಸಂಸ್ಥೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ವಿದ್ಯಾಸಂಸ್ಥೆಗಳ ಸುಮಾರು 1500 ವಿದ್ಯಾರ್ಥಿಗಳು ಈ ವಿಶೇಷಕಾರ್ಯಕ್ರಮದಲ್ಲಿ ಭಾಗಿಯಾದರು. ಘೋಷ ಸಂಚಲನದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಅನಕ, ಪಣವ, ಶಂಖ, ವಂಶಿ, ತ್ರಿಭುಜ ಮತ್ತುಜಲ್ಲರಿ, ಕೊಳಲು ಮೊದಲಾದ ವಾದ್ಯಪರಿಕರಗಳ ಜೊತೆ ಸಂಚಲನದಲ್ಲಿ ಭಾಗವಹಿಸಿರುವುದು ಅತ್ಯಂತ ವಿಶೇಷ ಸಂಗತಿ.
ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್‍ಕಲ್ಲಡ್ಕ, ಕಾರ್ಯದರ್ಶಿ ಡಾ. ಕೆ.ಎಂ ಕೃಷ್ಣ ಭಟ್, ಮಾಜಿ ಶಾಸಕ ಸಂಜೀವ ಮಠಂದೂರು ಪುತ್ತೂರಿನ ಅಟಲ್ ಉದ್ಯಾನ ಕೊಂಬೆಟ್ಟು ಇಲ್ಲಿ ಭಾರತಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ದೀಪ ಬೆಳಗಿಸಿ ಸಂಚಲನಕ್ಕೆ ಚಾಲನೆಯನ್ನು ನೀಡಿದರು. ನಂತರಕಲ್ಲಾರೆ ಹಾಗೂ ಬೊಳುವಾರಿನಿಂದ ಏಕಕಾಲದಲ್ಲಿ ಪಥಸಂಚಲನ ಆರಂಭಗೊಂಡು ಪುತ್ತೂರಿನ ಮುಖ್ಯರಸ್ತೆಯಿಂದ ಸಂಚರಿಸಿ, ಮಹತೋಭಾರ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಸಂಪನ್ನಗೊಂಡಿತು.
ಈ ಸಂದರ್ಭದಲ್ಲಿ ಹಲವಾರು ಮಂದಿ ಗಣ್ಯರು ಮಹಾಲಿಂಗೇಶ್ವರ ದೇವಳದ ರಥಬೀದಿಯಲ್ಲಿ ನಡೆದಜಯಘೋಷ ಪಥ ಸಂಚಲನದ ಸಮಾರೋಪದಲ್ಲಿ ಪಾಲ್ಗೊಂಡರು. ಸಾವಿರಾರು ವಿದ್ಯಾರ್ಥಿಗಳು, ನಾಗರಿಕರುರಸ್ತೆ ಬದಿಯಲ್ಲಿ ಸಾಲಾಗಿ ನಿಂತು ಪಥ ಸಂಚಲನಕ್ಕೆ ಪುಷ್ಪಾರ್ಚನೆ ಮಾಡಿಗೌರವವನ್ನು ಸಲ್ಲಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


