ಉಡುಪಿ: ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನ ಸಾಲಿಗ್ರಾಮ ದಾವಣಗೆರೆ ಇದರ ವತಿಯಿಂದ ನಾಡಿನ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ನೀಡಲಾಗುವ ಸರಸ್ವತಿ ಕನ್ನಡ ರತ್ನ ರಾಜ್ಯ ಪ್ರಶಸ್ತಿಗೆ ಉಡುಪಿಯ ಸಾಮಾಜಿಕ ಕಾರ್ಯಕರ್ತ ವ್ಯಕ್ತಿತ್ವ ವಿಕಸನ ತರಬೇತುದಾರ ರಾಘವೇಂದ್ರ ಪ್ರಭು ಕರ್ವಾಲು ಆಯ್ಕೆಯಾಗಿದ್ದಾರೆ ಪ್ರಶಸ್ತಿ ಪ್ರದಾನ ಸಮಾರಂಭ ಎ.19 ರಂದು ದಾವಣಗೆರೆಯಲ್ಲಿ ನಡೆಯಲಿದೆ ಎಂದು ಸಂಸ್ಥೆ ಸಂಸ್ಥಾಪಕ ಸಾಲಿಗ್ರಾಮ ಗಣೇಶ್ ಶೆಣೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶ್ರೀಯುತ ರಾಘವೇಂದ್ರ ಪ್ರಭು ಕವಾ೯ಲು ರವರು ಕಳೆದ ಹಲವಾರು ವರ್ಷಗಳಿಂದ ಸಾಮಾಜಿಕ ಕಾರ್ಯಕರ್ತರಾಗಿ ಹಾಗೂ ವ್ಯಕ್ತಿತ್ವ ವಿಕಸನ ತರಬೇತಿದಾರರಾಗಿ ಸುಮಾರು 500ಕ್ಕೂ ಮಿಕ್ಕಿದ ತರಬೇತಿಗಳನ್ನು ನೀಡಿದ್ದಾರೆ. ಅದೇ ರೀತಿ ರಕ್ತದಾನಿಯಾಗಿ 75 ಬಾರಿ ರಕ್ತದಾನ ಮಾಡಿ ಹಾಗೂ ವಿವಿಧ ಸಂಘ-ಸಂಸ್ಥೆಯಲ್ಲಿ ಸಕ್ರಿಯರಾಗಿರುತ್ತಾರೆ. ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ಸಂಘಟನಾ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


