ಚಿತ್ರಕಲಾ ಪರೀಕ್ಷೆಯಲ್ಲಿ ಅಂಬಿಕಾ ವಿದ್ಯಾರ್ಥಿಗಳಿಂದ ಗಣನೀಯ ಸಾಧನೆ

Upayuktha
0

13 ಮಂದಿ ವಿದ್ಯಾರ್ಥಿಗಳಿಗೆ ವಿಶಿಷ್ಟ ಶ್ರೇಣಿ, 21 ವಿದ್ಯಾರ್ಥಿಗಳಿಗೆ ಪ್ರಥಮ ಶ್ರೇಣಿ



ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯ ವಿದ್ಯಾರ್ಥಿಗಳು ಬೆಂಗಳೂರಿನ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಆಯೋಜಿಸಿದ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಭಾಗವಹಿಸಿ ವಿಶಿಷ್ಟ ಶ್ರೇಣಿ ಹಾಗೂ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಉತ್ತಮ ಸಾಧನೆಯನ್ನು ಮಾಡಿರುತ್ತಾರೆ. ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಿಸೆಂಬರ್‍ನಲ್ಲಿ ಈ ಪರೀಕ್ಷೆ ನಡೆದಿದ್ದು, ಇದೀಗ ಫಲಿತಾಂಶ ಪ್ರಕಟಗೊಂಡಿದೆ.


ಪರೀಕ್ಷೆಯು ಕಿರಿಯ ದರ್ಜೆ ಹಾಗೂ ಹಿರಿಯ ದರ್ಜೆ ವಿಭಾಗಗಳಲ್ಲಿ ನಡೆದಿದ್ದು, ಅಂಬಿಕಾ ವಿದ್ಯಾಲಯದಿಂದ ಒಟ್ಟು 34  ವಿದ್ಯಾರ್ಥಿಗಳು  ಭಾಗವಹಿಸಿ,  13 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಕಿರಿಯ ದರ್ಜೆಯಲ್ಲಿ, ಏಳನೇ ತರಗತಿಯ ಪೃಥ್ವಿಕ್ ಟಿ, ಅಶ್ನಿತ್ ರಂಜನ್, ಆರ್ಯಮೋಹನ್, ಸನ್ಮಯ್ ಎನ್., ಸೌಪರ್ಣಿಕ ದಾನೆಗೊಂಡರ್, ಮನಿಷ್‌ ಕಜೆ ವಿಶಿಷ್ಟ ಶ್ರೇಣಿ ಪಡೆದರೆ, ಒಂಬತ್ತನೇ ತರಗತಿಯ ವಿದ್ಯಾರ್ಥಿಗಳಾದ ಬಿ. ತ್ರಿಶಾ, ಸಾನ್ವಿ ಆರ್, ಆರುಶ್ ರಾವ್, ಇಶಾನಿ ಭಟ್, ಸಾನ್ವಿ, ವಂಶಿಕ ಬಿ. ರೈ ಹಾಗೂ ಇಂಚರ ಎಸ್. ಮಯ್ಯ ಹಿರಿಯ ದರ್ಜೆಯಲ್ಲಿ ವಿಶಿಷ್ಟ ಶ್ರೇಣಿಗೆ ಭಾಜನರಾಗಿದ್ದಾರೆ. ಉಳಿದಂತೆ ಕಿರಿಯ ದರ್ಜೆಯಲ್ಲಿ ಎಂಟು ಮಂದಿ ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಪಡೆದರೆ, ಹಿರಿಯ ದರ್ಜೆಯಲ್ಲಿ ಹದಿಮೂರು ಮಂದಿ ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಪಡೆದಿದ್ದಾರೆ. ಈ ಎಲ್ಲಾ ವಿದ್ಯಾರ್ಥಿಗಳಿಗೆ ಅಂಬಿಕಾ ವಿದ್ಯಾಲಯದ ಚಿತ್ರಕಲಾ ಶಿಕ್ಷಕಿ ಕೆ. ಜಯಲಕ್ಷ್ಮಿ ಮಾರ್ಗದರ್ಶನ ನೀಡಿರುತ್ತಾರೆ.



ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top