
ಸುರತ್ಕಲ್: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಳಾಯಿ ಫಿಶರೀಶ್ ನ ಶಾಲಾ ಅಭಿವೃದ್ದಿ ಸಮಿತಿ ಮತ್ತು ಹಳೆ ವಿದ್ಯಾರ್ಥಿ ಸಂಘಗಳ ಸಹಯೋಗದಲ್ಲಿ ಎಂ.ಆರ್. ಪಿ.ಎಲ್. ಸಂಸ್ಥೆಯ ಸಿ.ಎಸ್.ಆರ್. ಅನುದಾನದ ನೂತನ ಶೌಚಾಲಯ ಕಟ್ಟಡ ಉದ್ಘಾಟನೆ, ಪ್ರಜಾಪ್ರಭುತ್ವ ದಿನಾಚರಣೆ, ದತ್ತಿ ನಿಧಿ ಬಹುಮಾನ ವಿತರಣೆ ಸಮಾರಂಭ ನಡೆಯಿತು.
ಸರಕಾರಿ ಶಾಲೆಗಳಿಗೆ ಮೂಲಭೂತ ಸೌಲಭ್ಯಗಳ ಒದಗಿಸುವಿಕೆಗೆ ಕೈಗಾರಿಕಾ ಸಂಸ್ಥೆಗಳು ಹೆಚ್ಚಿನ ಕೊಡುಗೆ ನೀಡಬೇಕು ಎಂದು ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರೊ. ಕೃಷ್ಣಮೂರ್ತಿ ಚಿತ್ರಾಪುರ ನುಡಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ವರಿಗೂ ಸಮಾನ ಅವಕಾಶಗಳಿವೆ ಎಂದರು.
ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ದೇವದಾಸ ಕುಳಾಯಿ ಮಾತನಾಡಿ, ಸರಕಾರಿ ಕನ್ನಡ ಮಾಧ್ಯಮ ಶಾಲೆಗಳು ಸಂಸ್ಕಾರಯುತ ಶಿಕ್ಷಣ ನೀಡುತ್ತಿವೆ ಎಂದರು.
ನಿವೃತ್ತ ಶಿಕ್ಷಕಿ ಪುಷ್ಪಾವತಿ ಶ್ರೀನಿವಾಸ ರಾವ್ ಬಹುಮಾನ ವಿತರಣೆ ಮಾಡಿ ವಿದ್ಯಾರ್ಥಿಗಳ ಕಲಾ ಹಾಗೂ ಸೃಜನಶೀಲ ಪ್ರತಿಭಾ ಅನಾವರಣ ಕ್ಕೆ ಶಿಕ್ಷಕರ ಕೊಡುಗೆ ಅಪಾರ ಎಂದರು. ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷೆ ಮಂಜುಳಾ ಶುಭ ಹಾರೈಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಾಧವ ಸುವರ್ಣ ಮಾತನಾಡಿಮ ಎಂ.ಆರ್.ಪಿ.ಎಲ್ ಸಂಸ್ಥೆಯ ಕೊಡುಗೆಗೆ ಕೃತಜ್ಞತೆ ಸಲ್ಲಿಸಿ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳ ಅಭಿವೃದ್ಧಿಗೆ ಸರ್ವರ ಸಹಕಾರ ಅಗತ್ಯ ಎಂದರು.
ವಿದ್ಯಾರ್ಥಿಗಳು ಪ್ರಜಾಪ್ರಭುತ್ವ ದಿನಾಚರಣೆಯ ಕುರಿತು ಮಾತನಾಡಿದರು. ಗುತ್ತಿಗೆದಾರ ಪುನೀತ್ ಮತ್ತು ಶ್ರೀನಿವಾಸ ರಾವ್ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಶೋಭಾ ಸ್ವಾಗತಿಸಿದರು. ನೀತಾ ತಂತ್ರಿ ಮತ್ತು ರೂಪ ಬಹುಮಾನ ಪಟ್ಟಿ ವಾಚಿಸಿದರು. ಸುಕೇಶಿನಿ ವಂದಿಸಿದರು. ಸಿಂತಿಯ ಕಾರ್ಯಕ್ರಮ ನಿರೂಪಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

