ಬ್ರಹ್ಮಾವರ: ಜಿ.ಎಂ. ವಿದ್ಯಾನಿಕೇತನದಲ್ಲಿ ಗಣರಾಜ್ಯೋತ್ಸವ ಸಂಭ್ರಮ

Upayuktha
0


ಬ್ರಹ್ಮಾವರ: “ವಿಶ್ವದಲ್ಲಿಯೇ ಅತಿ ದೊಡ್ಡ ಹಾಗೂ ಪರಿಪಕ್ವ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮೈಗೂಡಿಸಿಕೊಂಡು ಬೆಳೆಯುತ್ತಿರುವ ದೇಶ ಎಂಬ ಹೆಗ್ಗಳಿಕೆ ಭಾರತಕ್ಕಿದೆ. ಭಾರತೀಯ ಸಂವಿಧಾನವು ವಿಶ್ವಕ್ಕೆ ಮಾದರಿಯಾಗಿ ನಿಂತಿರುವ ಲಿಖಿತ ಸಂವಿಧಾನವಾಗಿದೆ. ಅದರ ಮೂಲ ಆಶಯಗಳನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವುದು ಅತ್ಯಂತ ಅಗತ್ಯ. ವಿವಿಧತೆಯಲ್ಲಿಯೇ ಏಕತೆಯನ್ನು ಸಾಧಿಸಿ, ಸಹಭಾಗಿತ್ವದ ಬದುಕನ್ನು ನಡೆಸುವುದೇ ನಮ್ಮ ಅತಿ ದೊಡ್ಡ ಶಕ್ತಿ ಎಂಬುದನ್ನು ನಾವು ಮರೆಯಬಾರದು” ಎಂದು ಎಂಜಿಎಂ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ನಿವೃತ್ತ ಮುಖ್ಯಸ್ಥ ಪ್ರೊ. ಕೊಕ್ಕಣೆ೯ ಸುರೇಂದ್ರನಾಥ ಶೆಟ್ಟಿ ಹೇಳಿದರು.


ಅವರು ಬ್ರಹ್ಮಾವರದ ಜಿ.ಎಂ. ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ಹಾಗೂ ಜಿ.ಎಂ. ಗ್ಲೋಬಲ್ ಸ್ಕೂಲ್ ಜಂಟಿಯಾಗಿ ಹಮ್ಮಿಕೊಂಡ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ವಿಶೇಷ ಉಪನ್ಯಾಸ ನೀಡಿದರು.


ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಪ್ರಕಾಶಚಂದ್ರ ಶೆಟ್ಟಿ ವಹಿಸಿ ಗಣರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು. ಪ್ರಾಂಶುಪಾಲೆ ದೀಪ್ತಿ ಶೆಟ್ಟಿ ಗಣರಾಜ್ಯೋತ್ಸವದ ಮಹತ್ವ ಕುರಿತು ಮಾಹಿತಿ ಉಪನ್ಯಾಸ ನೀಡಿದರು. ಕಾಲೇಜಿನ ಹಿರಿಯ ಶಿಕ್ಷಕ ಸೆಬಾಸ್ಟಿಯನ್ ಅವರು ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು.


ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಡಾ. ಅನೂಷ ಸುಬ್ರಹ್ಮಣ್ಯಂ, ಶಿಕ್ಷಣ ಸಂಸ್ಥೆಯ ಆಡಳಿತ ನಿರ್ದೇಶಕ ಪ್ರಣವ್ ಶೆಟ್ಟಿ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಪರವಾಗಿ ಅನುಜಾ ಶೆಟ್ಟಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ವಿದ್ಯಾರ್ಥಿನಿ ಮಾನ್ಯ ಪೈ ಸ್ವಾಗತಿಸಿ, ಮಂಜುಶ್ರೀ ವಂದಿಸಿದರು.



ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top