ಎಸ್ ಡಿ ಎಂ ಕಾಲೇಜು ವಾರ್ಷಿಕ ಸಂಚಿಕೆ ‘ಮನೀಷಾ’ ಬಿಡುಗಡೆ

Upayuktha
0


ಉಜಿರೆ:  ಶ್ರೀ ಧ. ಮಂ. ಕಾಲೇಜಿನ 2024-25ನೇ ಸಾಲಿನ ವಾರ್ಷಿಕ ಸಂಚಿಕೆ ‘ಮನೀಷಾ’ವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಧರ್ಮಸ್ಥಳದಲ್ಲಿ ಇಂದು (ಜ.5) ಬಿಡುಗಡೆಗೊಳಿಸಿದರು.


ಈ ಸಂದರ್ಭದಲ್ಲಿ, ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆ, ಬೆಂಗಳೂರಿನ ಎಸ್.ಡಿ.ಎಂ. ನ್ಯಾಚುರೋಪತಿ ಚಿಕಿತ್ಸಾ ಕೇಂದ್ರ ‘ಕ್ಷೇಮವನ’ದ ಕಾರ್ಯನಿರ್ವಾಹಕ ನಿರ್ದೇಶಕಿ ಶ್ರದ್ಧಾ ಅಮಿತ್, ಉಜಿರೆ ಎಸ್ ಡಿ ಎಂ ಎಜುಕೇಶನಲ್ ಸೊಸೈಟಿ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್., ಕಾಲೇಜು ಪ್ರಾಂಶುಪಾಲ ಡಾ. ವಿಶ್ವನಾಥ ಪಿ., ಉಪ ಪ್ರಾಂಶುಪಾಲೆ ನಂದ ಕುಮಾರಿ ಕೆ.ಪಿ., ಆಡಳಿತಾಂಗ ಕುಲಸಚಿವ ಡಾ. ಶ್ರೀಧರ ಎನ್. ಭಟ್, ಡೀನ್ ಗಳಾದ ಡಾ. ಸೌಮ್ಯ ಬಿ.ಪಿ. (ಸ್ನಾತಕೋತ್ತರ ಕೇಂದ್ರ), ಡಾ. ಭಾಸ್ಕರ ಹೆಗಡೆ (ಕಲಾ ನಿಕಾಯ), ಐಕ್ಯೂಎಸಿ ಸಂಯೋಜಕ ಗಜಾನನ ಆರ್. ಭಟ್, ಮನೀಷಾ ಸಂಚಿಕೆಯ ಕಾರ್ಯನಿರ್ವಾಹಕ ಸಂಪಾದಕ ಡಾ. ರಾಜಶೇಖರ ಹಳೆಮನೆ, ಸಂಪಾದಕೀಯ ಮಂಡಳಿ ಸದಸ್ಯರಾದ ಡಾ. ಮಲ್ಲಿಕಾರ್ಜುನ ಎನ್., ಡಾ. ಮಂಜುಶ್ರೀ ಆರ್., ವಿದ್ಯಾರ್ಥಿ ಸಂಪಾದಕರಾದ ಶ್ರೇಯಾ ಮಿಂಚಿನಡ್ಕ (ತೃತೀಯ ಬಿಎ), ಚಿಂತನ (ತೃತೀಯ ಬಿಎಸ್ಸಿ), ಚಂದನ್ ಎಂ.ಎ. (ತೃತೀಯ ಬಿಎ), ಗಿಂಡರ್ ಶರಣಪ್ಪ ಅಡಿವೆಪ್ಪ (ತೃತೀಯ ಬಿಎ) ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



Post a Comment

0 Comments
Post a Comment (0)
To Top