ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗ, ಸಂಸ್ಕೃತ ಸಂಘ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇವುಗಳ ವಾರ್ಷಿಕ ಕಾರ್ಯನಿರ್ವಹಣಾ ಚಟುವಟಿಕೆಗಳ ಸಮಾರೋಪ ಸಮಾರಂಭ ನಡೆಯಿತು.
ಸಂಸ್ಕೃತ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನಕುಮಾರ ಐತಾಳ್ ಇವರು ಅಧ್ಯಕ್ಷತೆ ವಹಿಸಿ ಮಾತನಾಡಿ ಎಲ್ಲ ಕಾರ್ಯಗಳಿಗೆ ಸಹಕಾರ ಹಾಗೂ ಪ್ರೋತ್ಸಾಹ ಕೊಡುತ್ತಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸಂಸ್ಥೆಗಳ ಆಡಳಿತ ಮಂಡಳಿ, ಪ್ರಾಚಾರ್ಯರು ಹಾಗೆಯೇ ವಿದ್ಯಾರ್ಥಿಗಳ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು.
ಸಂಸ್ಕೃತ ಸಂಘದ ಅಧ್ಯಕ್ಷೆ ಹಂಸಿನಿ ಭಿಡೆಯನ್ನು ಎಲ್ಲರ ಪರವಾಗಿ ಗೌರವಿಸಲಾಯಿತು ಹಾಗೆಯೇ ಪದಾಧಿಕಾರಿಗಳನ್ನು ಅಭಿನಂದಿಸಲಾಯಿತು. ವಿದ್ಯಾರ್ಥಿಗಳಿಂದ ಸಂಸ್ಕೃತ ಗೀತೆಗಳ ಗಾಯನ ನಡೆಯಿತು. ಹಂಸಿನಿ ಭಿಡೆ ವಾರ್ಷಿಕ ವರದಿ ವಾಚನ ಮಾಡಿದರು. ವಿದ್ಯಾರ್ಥಿನಿ ಸಿರಿ ಗೌಡ ಅನಿಸಿಕೆ ವ್ಯಕ್ತಪಡಿಸಿದರು.
ಸಂಸ್ಕೃತ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಸನ್ನಾ ಸ್ವಾಗತಿಸಿ, ಉಪಾಧ್ಯಕ್ಷ ಯಶಸ್ವಿ ಧನ್ಯವಾದ ನೀಡಿದರು. ಅಂತರಾಧ್ಯಯನ ವೃತ್ತಂ ಇದರ ಸಂಯೋಜಕಿ ಶ್ರೀಪೂರ್ಣಾ ನಿರೂಪಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

