ಸಾಲಿಗ್ರಾಮ: ಡಿವೈನ್ ಪಾರ್ಕ್ ಸಂಸ್ಥಾಪಕ ಡಾ. ಎ. ಚಂದ್ರಶೇಖರ ಉಡುಪ ನಿಧನ

Upayuktha
0


ಉಡುಪಿ:  ಐವತ್ತು ವರ್ಷಗಳಿಂದ ಡಿವೈನ್ ಪಾರ್ಕ್ ಮೂಲಕ  ಆಧ್ಯಾತ್ಮಿಕ ಉನ್ನತಿಗಾಗಿ ಶ್ರಮಿಸುತ್ತಿದ್ದ ಸಾಲಿಗ್ರಾಮ ಡಿವೈನ್ ಪಾರ್ಕ್ ಸಂಸ್ಥಾಪಕ ಡಾ. ಎ. ಚಂದ್ರಶೇಖ‌ರ ಉಡುಪ (75) ಹೃದಯಾಘಾತದಿಂದ ಬುಧವಾರ ಬೆಳಗಿನ ಜಾವ ದೈವಾಧೀನರಾದರು. 


ಲಕ್ಷಾಂತರ ಮಂದಿ ದೇಶ- ವಿದೇಶದಲ್ಲಿ ಇವರ ಭಕ್ತರು, ಅನುಯಾಯಿಗಳಿದ್ದಾರೆ. ಅವರೆಲ್ಲರೂ ಅಕ್ಕರೆಯಿಂದ ಡಾಕ್ಟರ್‌ಜೀ ಎಂದೇ ಇವರನ್ನು ಕರೆಯುತ್ತಿದ್ದರು.


ಡಿವೈನ್ ಪಾರ್ಕ್‌ನ ಸಹಸಂಸ್ಥೆಯಾಗಿ ಯೋಗಬನ ಸ್ಥಾಪಿಸಿದ ಇವರು. ಯೋಗ, ಪ್ರಕೃತಿ, ಆಯುರ್ವೇದಗಳ ಜತೆಗೆ ಆಧ್ಯಾತ್ಮಿಕ ಚಿಕಿತ್ಸಕ ಕ್ರಮವನ್ನೂ ಮುನ್ನೆಲೆಗೆ ತಂದಿದ್ದರು.


ಮೃತರು ಪುತ್ರ ಡಾ. ವಿವೇಕ ಉಡುಪ ಹಾಗೂ ಸೊಸೆ, ಪತ್ನಿ, ಪುತ್ರಿಯನ್ನು ಅಗಲಿದ್ದಾರೆ. ಇಂದು ಬೆಳಗ್ಗೆ 10.30 ರಿಂದ ಸಂಜೆ 4 ರ ತನಕ ಮೃತರ ಡಿವೈನ್ ಪಾರ್ಕ್ ನ ಜ್ಞಾನ ಮಂದಿರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದು ಅನಂತರ ಅಂತಿಮ ವಿಧಿ ವಿಧಾನ ನೆರವೇರಲಿದೆ ಎಂದು ಡಿವೈನ್ ಪಾರ್ಕ್ ಪ್ರಕಟನೆಯಲ್ಲಿ ತಿಳಿಸಿದೆ.



ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top